ಮುಖ್ಯ ಪುಟ  ಸುದ್ದಿ ಜಗತ್ತು > ಸುದ್ದಿಗಳು > ರಾಜ್ಯ ಸುದ್ದಿ
ಸಲಹೆ/ಪ್ರತಿಕ್ರಿಯೆಮಿತ್ರನಿಗೆ ಕಳುಹಿಸಿಈ ಪುಟ ಮುದ್ರಿಸಿ
 
ಅವಹೇಳನಕಾರಿ ಮಾತನಾಡಿಲ್ಲ: ದೇವೇಗೌಡ  Search similar articles
ಹಾವೇರಿಯ ಗೋಲಿಬಾರ್ ಪ್ರಕರಣದಲ್ಲಿ ಆಗಿರುವ ಅನಾಹುತಗಳ ಕುರಿತು ತಾನು ಮುಖ್ಯಮಂತ್ರಿ ವಿರುದ್ಧ ಅವಹೇಳನಕಾರಿಯಾಗಿ ಮಾತನಾಡಿಲ್ಲ ಎಂದು ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡ ತಿಳಿಸಿದ್ದಾರೆ.

ನಗರದಲ್ಲಿ ಗುರುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಹಾವೇರಿಯ ಭೇಟಿ ಕುರಿತು ಯಾವುದೇ ರಾಜಕೀಯ ಉದ್ದೇಶವಿಲ್ಲ. ಕೇವಲ ಮಾನವೀಯ ದೃಷ್ಟಿಯಿಂದ ಭೇಟಿ ನೀಡಿದ್ದೆ ಎಂದು ತಿಳಿಸಿದರು.

ಗೋಲಿಬಾರ್ ಘಟನೆಯಲ್ಲಿ ಗಾಯಗೊಂಡವರಿಗೆ ಪಕ್ಷದ ವತಿಯಿಂದ ಸೂಕ್ತ ಚಿಕಿತ್ಸೆ ನೀಡಲಾಗುವುದು ಎಂದು ತಿಳಿಸಿದ ಅವರು, ಈ ಬಗ್ಗೆ ಸರ್ಕಾರ ತೆಗೆದುಕೊಂಡಿರುವ ನಿಲುವಿನ ಕುರಿತು ಮುಂದಿನ ದಿನಗಳಲ್ಲಿ ಪ್ರತಿಕ್ರಿಯಿಸುವುದಾಗಿ ತಿಳಿಸಿದರು.

ಕಾಂಗ್ರೆಸ್ ಜೊತೆ ಹೊಂದಾಣಿಕೆ

ಇದೇ ಸಂದರ್ಭದಲ್ಲಿ ವಿಧಾನಪರಿಷತ್‌ನ ಚುನಾವಣೆಯಲ್ಲಿ ಕಾಂಗ್ರೆಸ್ ಜೊತೆ ಹೊಂದಾಣಿಕೆ ಕುರಿತು ಪತ್ರಕರ್ತರು ಕೇಳಲಾದ ಪ್ರಶ್ನೆಗೆ ಉತ್ತರ ನೀಡಿದ ಅವರು, ಕಾಂಗ್ರೆಸ್ ಜೊತೆ ಮಾಡಿಕೊಂಡಿರುವ ಮೈತ್ರಿ ಕುರಿತು ತೃಪ್ತಿ ಇದೆ ಎಂದು ತಿಳಿಸಿದರು. ಮುಂದಿನ ಲೋಕಸಭಾ ಚುನಾವಣೆಯಲ್ಲೂ ಇದೇ ರೀತಿಯಲ್ಲಿ ಹೊಂದಾಣಿಕೆ ಮಾಡುವ ಕುರಿತು ಸಮಾಲೋಚನೆ ನಡೆಸಲಾಗುವುದು ಎಂದು ತಿಳಿಸಿದರು.
ಮತ್ತಷ್ಟು
ತೈಲ ದರ ಕಡಿತ: ಸಚಿವ ಸಂಪುಟದ ನಿರ್ಧಾರ
ರೈತ ಆತ್ಮಹತ್ಯೆಗೆ ಸರಕಾರ ಹೊಣೆ: ಕಾಂಗ್ರೆಸ್ ಆರೋಪ
ಶಂಕಿತ ಉಗ್ರರ ನ್ಯಾಯಾಂಗ ಬಂಧನ ವಿಸ್ತರಣೆ
ರೈತ ಆತ್ಮಹತ್ಯೆ: ಪರಿಹಾರಕ್ಕೆ ಒತ್ತಾಯ
ರೈತ ಆತ್ಮಹತ್ಯೆಗೆ ಸರಕಾರದ ಬೇಜವಾಬ್ದಾರಿ ಕಾರಣ
ಶಿಕ್ಷಕರ ವರ್ಗಾವಣೆ ಪ್ರಕ್ರಿಯೆ ಇಲ್ಲ: ಕಾಗೇರಿ