ರಾಜ್ಯ ಸರಕಾರ ಪೆಟ್ರೋಲ್, ಡೀಸೆಲ್ ಹಾಗೂ ಅನಿಲ ಅಡುಗೆ ಮೇಲಿನ ದರವನ್ನು ಕಡಿತಗೊಳಿಸಿರುವ ಬಗ್ಗೆ ವಿವಿಧ ಪಕ್ಷಗಳಿಂದ ಮಿಶ್ರ ಪ್ರತಿಕ್ರಿಯೆ ವ್ಯಕ್ತವಾಗಿದೆ.
ಇದು ಕೇವಲ ಕಣ್ಣೊರೆಸುವ ತಂತ್ರ ಆರೋಪಿಸಿದ ಜೆಡಿಯು ಪ್ರಧಾನ ಕಾರ್ಯದರ್ಶಿ ಜಿ.ಕೆ.ಸಿ. ರೆಡ್ಡಿ, ಹೊರರಾಜ್ಯಗಳಿಗೆ ಹೋಲಿಸಿದರೆ ಇದು ತೀರ ಅತ್ಯಲ್ಪ ಎಂದು ತಿಳಿಸಿದ್ದಾರೆ.
ಬಿಹಾರ ಸರಕಾರ ಹಿಂದಿನ ಬೆಲೆಗಿಂತ ಕಡಿಮೆ ಬೆಲೆ ನಿಗದಿ ಮಾಡಿದೆ. ಹೀಗಿರುವಾಗ ರಾಜ್ಯ ಸರಕಾರ ಮಾರಾಟ ತೆರಿಗೆಯನ್ನು ಕಡಿಮೆಗೊಳಿಸಿದ್ದರೂ ಇದರಿಂದ ಯಾರಿಗೂ ಪ್ರಯೋಜನವಾಗುವುದಿಲ್ಲ ಎಂಬ ಅಭಿಪ್ರಾಯ ವ್ಯಕ್ತವಾಗುತ್ತಿದೆ.
ಈ ಬಗ್ಗೆ ಪ್ರತಿಕ್ರಿಯಿಸಿರುವ ಬಿಜೆಪಿ, ಕೇಂದ್ರ ಸರಕಾರ ರಾಜ್ಯಕ್ಕೆ ಹಂಚಿಕೆ ಮಾಡುವ ಪೆಟ್ರೋಲ್ ಮೂಲ ಬೆಲೆ ಬೇರೆ ರಾಜ್ಯಗಳಿಗೆ ಹೋಲಿಸಿದರೆ ರಾಜ್ಯಕ್ಕೆ ಜಾಸ್ತಿ ಇದೆ. ಈ ಅನ್ಯಾಯವನ್ನು ಸರಿಪಡಿಸುವಂತೆ ದೆಹಲಿಗೆ ನಿಯೋಗ ತೆರಳಿ ಪ್ರಧಾನ ಮಂತ್ರಿಗಳನ್ನು ಒತ್ತಾಯಿಸುವ ನಿರ್ಧಾರವನ್ನು ಕೈಗೊಳ್ಳಲಾಗಿದೆ ಎಂದು ಗ್ರಾಮೀಣ ಅಭಿವೃದ್ದಿ ಹಾಗೂ ಪಂಚಾಯತ್ ರಾಜ್ ಸಚಿವೆ ಶೋಭಾ ಕರಂದ್ಲಾಜೆ ತಿಳಿಸಿದ್ದಾರೆ.
ತೆರಿಗೆ ಕಡಿತದ ಬಳಿಕ ಹೊಸ ದರಗಳು ಇಂತಿವೆ: ಪೆಟ್ರೋಲ್-57.15 ರೂ. ಡೀಸೆಲ್-39.15 ರೂ. ಅಡುಗೆ ಅನಿಲ-348 ರೂ.
|