ರಾಜ್ಯದಲ್ಲಿ ರಸಗೊಬ್ಬರದ ಅಭಾವ ಕಂಡು ಬಂದಿಲ್ಲ. ರಸಗೊಬ್ಬರಕ್ಕಾಗಿ ನಡೆಸುತ್ತಿರುವ ಗಲಭೆಗೆ ಜೆಡಿಎಸ್ ಹಾಗೂ ಕಾಂಗ್ರೆಸ್ ಪಕ್ಷಗಳೇ ಕಾರಣ ಎಂದು ಆರೋಗ್ಯ ಸಚಿವ ಶ್ರೀರಾಮುಲು ತಿಳಿಸಿದ್ದಾರೆ.
ನಗರದಲ್ಲಿ ಗುರುವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಜ್ಯ ಹಾಗೂ ಕೇಂದ್ರ ಸರಕಾರಗಳು ರಸಗೊಬ್ಬರಗಳನ್ನು ಸೂಕ್ತ ರೀತಿಯಲ್ಲಿ ಪೂರೈಸುತ್ತಿವೆ. ರಾಜ್ಯದಲ್ಲಿ ಇದುವರೆಗೆ ರಸಗೊಬ್ಬರದ ಕೊರತೆ ಕಂಡು ಬಂದಿಲ್ಲ ಎಂದು ತಿಳಿಸಿದರು.
ರಾಜ್ಯದ ಎಲ್ಲಾ ಮೂಲೆಗಳಿಗೂ ಸಮರ್ಪಕವಾಗಿ ರಸಗೊಬ್ಬರ ಪೂರೈಸುವಂತೆ ಎಲ್ಲಾ ಅಧಿಕಾರಿಗಳಿಗೆ ಈಗಾಗಲೇ ಸೂಚನೆ ನೀಡಲಾಗಿದೆ. ಅದರಂತೆ ಎಲ್ಲಾ ಕಡೆಗಳಿಗೂ ಸರಬರಾಜು ಮಾಡಲಾಗುತ್ತಿದೆ ಎಂದು ತಿಳಿಸಿದರು.
ದಾವಣಗೆರೆ ವರದಿ ಈ ಮಧ್ಯೆ ದಾವಣಗೆರೆಯಲ್ಲಿ ವಿಷಸೇವನೆ ಮಾಡಿ ಮೃತ ಪಟ್ಟ ರೈತ ಅಜ್ಜಪ್ಪ ಕುಟುಂಬಕ್ಕೆ ಕೆಪಿಸಿಸಿ ವತಿಯಿಂದ 1 ಲಕ್ಷ ರೂ. ಪರಿಹಾರ ಧನ ನೀಡಲಾಗುವುದು ಎಂದು ಕೆಪಿಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ತಿಳಿಸಿದ್ದಾರೆ. ಇಂದು ಸ್ಥಳಕ್ಕೆ ಭೇಟಿ ನೀಡಿದ ಅವರು ಈ ಘೋಷಣೆ ಮಾಡಿದ್ದಾರೆ.
|