ಮುಖ್ಯ ಪುಟ  ಸುದ್ದಿ ಜಗತ್ತು > ಸುದ್ದಿಗಳು > ರಾಜ್ಯ ಸುದ್ದಿ
ಸಲಹೆ/ಪ್ರತಿಕ್ರಿಯೆಮಿತ್ರನಿಗೆ ಕಳುಹಿಸಿಈ ಪುಟ ಮುದ್ರಿಸಿ
 
ಕೃಷಿ ಬಡ್ಡಿದರದಲ್ಲಿ ಕಡಿತ: ಸರ್ಕಾರ ಚಿಂತನೆ  Search similar articles
ರೈತರ ಕೃಷಿ ಸಾಲದ ಬಡ್ಡಿದರವನ್ನು ಶೇ. ನಾಲ್ಕರಿಂದ ಶೇ. ಮೂರಕ್ಕೆ ಇಳಿಸಲು ಸರ್ಕಾರ ಚಿಂತನೆ ನಡೆಸಿದೆ ಎಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ತಿಳಿಸಿದ್ದಾರೆ.

ತಮ್ಮ ಸ್ವಕ್ಷೇತ್ರವಾದ ಶಿವಮೊಗ್ಗ ಭೇಟಿ ನೀಡಿದ ಸಂದರ್ಭದಲ್ಲಿ ಶುಕ್ರವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರೈತರ ಮೇಲಿನ ಹೊರೆಯನ್ನು ತಪ್ಪಿಸುವ ನಿಟ್ಟಿನಲ್ಲಿ ಕೃಷಿ ಸಾಲದ ಬಡ್ಡಿದರದಲ್ಲಿ ಕಡಿತಗೊಳಿಸುವ ಬಗ್ಗೆ ಸರ್ಕಾರ ಚಿಂತನೆ ನಡೆಸಿದ್ದು, ಶೀಘ್ರವೇ ಅನುಷ್ಠಾನ ತರಲು ಪ್ರಯತ್ನಿಸುವುದಾಗಿ ತಿಳಿಸಿದರು.

ಸಾವಯವ ಕೃಷಿಗೆ ಹೆಚ್ಚಿನ ಆದ್ಯತೆ ನೀಡಲಾಗುವುದು ಎಂದು ತಿಳಿಸಿದ ಅವರು, ರೈತರ ಸಮಸ್ಯೆಗಳ ಬಗ್ಗೆ ಕೂಲಂಕುಷವಾಗಿ ಚರ್ಚೆ ನಡೆಸಿ ರೈತರ ಏಳಿಗೆಗಾಗಿ ಪ್ರಮಾಣಿಕ ಪ್ರಯತ್ನವನ್ನು ನಡೆಸುತ್ತೇನೆ ಎಂದು ತಿಳಿಸಿದರು.

ಇತ್ತೀಚೆಗೆ ರೈತರ ಆತ್ಮಹತ್ಯೆಗೆ ರಸಗೊಬ್ಬರ ಅಥವಾ ಬಿತ್ತನೆ ಬೀಜದ ಸಮಸ್ಯೆಗಳು ಕಾರಣವಲ್ಲ. ಈ ಬಗ್ಗೆ ಸೂಕ್ತ ತನಿಖೆ ನಡೆಸಲಾಗುವುದು. ಆತ್ಮಹತ್ಯೆ ಮಾಡಿಕೊಂಡ ರೈತನ ಕುಟುಂಬಗಳಿಗೆ ಸೂಕ್ತ ಪರಿಹಾರವನ್ನು ಸರ್ಕಾರ ನೀಡಲಿದೆ ಎಂದು ತಿಳಿಸಿದ ಅವರು, ರೈತರು ತಾಳ್ಮೆಯಿಂದ ವರ್ತಿಸುವಂತೆ ಮನವಿ ಮಾಡಿದರು.
ಮತ್ತಷ್ಟು
ಹೈಕಮಾಂಡ್ ತೀರ್ಮಾನವೇ ಅಂತಿಮ: ಖರ್ಗೆ
ಚಿಕುನ್‌ಗುನ್ಯಾ ಔಷಧಿ ಅಲಭ್ಯ: ಪ್ರತಿಭಟನೆ
ಸಿಎಂರಿಂದ ಗೋಲಿಬಾರ್ ಗಾಯಳು ಭೇಟಿ
ಮೇಲ್ಮನೆ: ಎಲ್ಲ ಅಭ್ಯರ್ಥಿಗಳ ಅವಿರೋಧ ಆಯ್ಕೆ
ರಸಗೊಬ್ಬರ ಕೊರತೆ, ವಿಪಕ್ಷಗಳ ಕುತಂತ್ರ: ರಾಮುಲು
ತೈಲ ಬೆಲೆ ಇಳಿಕೆಗೆ ಮಿಶ್ರ ಪ್ರತಿಕ್ರಿಯೆ