ಮುಖ್ಯಮಂತ್ರಿಯಾದ ಬಳಿಕ ಮೊದಲ ಬಾರಿಗೆ ತವರು ಜಿಲ್ಲೆ ಶಿವಮೊಗ್ಗಕ್ಕೆ ಆಗಮಿಸಿರುವ ಬಿ.ಎಸ್. ಯಡಿಯೂರಪ್ಪನವರಿಗೆ ಅದ್ದೂರಿ ಸ್ವಾಗತ ನೀಡಲಾಯಿತು.
ಶಿವಮೊಗ್ಗದಲ್ಲಿ ನಿರ್ಮಿಸಲು ಉದ್ದೇಶಿಸಿರುವ ನೂತನ ವಿಮಾನನಿಲ್ದಾಣಕ್ಕೆ ಶಿಲಾನ್ಯಾಸ ನೇರೆವೇರಿಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಶಿವಮೊಗ್ಗದಲ್ಲಿ ಸಂಶೋಧನಾ ಕೇಂದ್ರ ಸ್ಥಾಪನೆ ಮಾಡಲಾಗುವುದು. ಹಾಗೆಯೇ, ಶಿವಮೊಗ್ಗ ಜಿಲ್ಲೆಯನ್ನು ಅಭಿವೃದ್ದಿಯ ಮೈಲುಗಲ್ಲಾಗಿ ಮಾಡಲು ಉದ್ದೇಶಿಸಲಾಗಿದೆ ಎಂದು ತಿಳಿಸಿದರು.
ರಾಜ್ಯದ ಸಮಗ್ರ ಅಭಿವೃದ್ದಿಗೆ ಆದ್ಯತೆ ನೀಡುವುದಾಗಿ ತಿಳಿಸಿದ ಅವರು, ಇದಕ್ಕಾಗಿ ಪ್ರಾಮಾಣಿಕ ಪ್ರಯತ್ನ ನಡೆಸುವುದಾಗಿ ತಿಳಿಸಿದರು.
ರಸಗೊಬ್ಬರದ ಅಭಾವಕ್ಕೆ ರಾಷ್ಟ್ರಪತಿ ಆಡಳಿತವೇ ಕಾರಣ ಎಂದು ಆರೋಪಿಸಿದ ಅವರು, ರಸಗೊಬ್ಬರಕ್ಕಾಗಿ ಈಗಾಗಲೇ ಸೂಕ್ತ ಕ್ರಮಗಳನ್ನು ಕೈಗೊಳ್ಳಲಾಗಿದೆ ಎಂದು ತಿಳಿಸಿದರು.
|