ರಾಜ್ಯದಲ್ಲಿನ ನೀರಾವರಿ ಯೋಜನೆಗೆ ಕಾಯಕಲ್ಪ ಒದಗಿಸುವ ಕುರಿತು ಚಿಂತನೆ ನಡೆಸಲಾಗಿದ್ದು, ಶೀಘ್ರವೇ ಕ್ರಮ ಕೈಗೊಳ್ಳಲಾಗುವುದು ಎಂದು ಜಲಸಂಪನ್ಮೂಲ ಹಾಗೂ ನೀರಾವರಿ ಸಚಿವ ಬಸವರಾಜ್ ಬೊಮ್ಮಾಯಿ ತಿಳಿಸಿದ್ದಾರೆ.
ನಗರದಲ್ಲಿ ಶುಕ್ರವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನೀರಾವರಿ ಯೋಜನೆ ಬೇಕಾಗುವ ಹಣವನ್ನು ಮುಂದಿನ ಬಜೆಟ್ನಲ್ಲಿ ಪ್ರಕಟಿಸಲಾಗುವುದು ಎಂದು ತಿಳಿಸಿದರು.
ಬಿಜಾಪುರ ಹಾಗೂ ಬಾಗಲಕೋಟೆಗಳಲ್ಲಿ ಕೆರೆಗೆ ನೀರು ತುಂಬುವ ಯೋಜನೆಗೆ ಚಾಲನೆ ನೀಡಲಾಗುವುದು ಎಂದ ಅವರು, ಕಳಪೆ ಕಾಮಗಾರಿ ಬಗ್ಗೆ ಸೂಕ್ತ ತನಿಖೆ ನಡೆಸಲು ಆದೇಶ ನೀಡಲಾಗಿದೆ ಎಂದು ತಿಳಿಸಿದರು.
ರಾಜ್ಯದ ನೀರಾವರಿ ಇಲಾಖೆಯಲ್ಲಿ ಇಂಜಿನಿಯರ್ಗಳ ಕೊರತೆ ಇದ್ದು, ಶೀಘ್ರವೇ ನೇಮಕ ಮಾಡಿಕೊಳ್ಳಲಾಗುವುದು. ಈ ನಿಟ್ಟಿನಲ್ಲಿ ಕೆಪಿಎಸ್ಸಿ ಮೂಲಕ ಇಂಜಿನಿಯರ್ ಹುದ್ದೆಯನ್ನು ಭರ್ತಿ ಮಾಡಿಕೊಳ್ಳಲಾಗುವುದು ಎಂದು ಅವರು ತಿಳಿಸಿದರು.
|