ಸಿಲಿಕಾನ್ ಸಿಟಿ, ಉದ್ಯಾನನಗರಿ ಎಂದು ನಾಮಕರಣಗೊಂಡಿದ್ದ ರಾಜಧಾನಿಗೆ ಬೆಂಗಳೂರು ಮುಂದಿನ ದಿನಗಳಲ್ಲಿ ಕ್ರೀಡಾ ನಗರಿಯಾಗಿ ಕಾಣಿಸಿಕೊಳ್ಳಲಿದೆ.
ಈ ಬಗ್ಗೆ ಸ್ಪಷ್ಟೀಕರಣ ನೀಡಿದ ಯುವಜನ ಸೇವೆ ಮತ್ತು ಕ್ರೀಡಾ ಸಚಿವ ಗೂಳಿಹಟ್ಟಿ ಶೇಖರ್, ದೇಶದಲ್ಲಿ 2020ರ ವೇಳೆಗೆ ಅಂತಾರಾಷ್ಟ್ರೀಯ ಮಟ್ಟದ ಕ್ರೀಡಾಕೂಟ ನಡೆಯುವ ನೀರೀಕ್ಷೆ ಇದೆ. ಈ ಹಿನ್ನೆಲೆಯಲ್ಲಿ ಈಗಿನಿಂದಲೇ ಬೆಂಗಳೂರನ್ನು ಸಜ್ಜುಗೊಳಿಸುವ ನಿಟ್ಟಿನಲ್ಲಿ ಕ್ರೀಡಾ ನಗರಿ ನಿರ್ಮಿಸಲು ಆಲೋಚಿಸಲಾಗಿದೆ ಎಂದು ತಿಳಿಸಿದರು.
ಕ್ರೀಡಾ ನಗರಿಗಾಗಿ ಬೆಂಗಳೂರು ಅಂತಾರಾಷ್ಟ್ತ್ರೀಯ ವಿಮಾನ ನಿಲ್ದಾಣ ಇರುವ ದೇವನಹಳ್ಳಿ ಬಳಿ ಕ್ರೀಡಾ ನಗರಿ ನಿರ್ಮಿಸುವ ಸಂಬಂಧ ಚರ್ಚೆ ನಡೆದಿದೆ. ಇದಕ್ಕಾಗಿ ಈಗಾಗಲೇ 600 ಎಕರೆ ಭೂಮಿಯನ್ನು ಗುರುತಿಸಲಾಗಿದೆ ಎಂದು ಅವರು ತಿಳಿಸಿದರು.
ಬೆಂಗಳೂರಿನಲ್ಲಿ ಮುಂದಿನ ತಿಂಗಳು 22ರಿಂದ 29 ರವರೆಗೆ ನಡೆಸಲು ಉದ್ದೇಶಿಸಿರುವ ರಾಷ್ಟ್ತ್ರೀಯ ಯುವ ಅಥ್ಲೆಟಿಕ್ಸ್ ಕ್ರೀಡಾಕೂಟವನ್ನು ಮಳೆಯ ಹಿನ್ನೆಲೆಯಲ್ಲಿ ಮುಂದೂಡುವ ಕುರಿತು ಇದೇ 23ರಂದು ಉನ್ನತ ಮಟ್ಟದ ಸಭೆ ನಡೆಯಲಿದೆ. ಆ ಬಳಿಕ ಅಂತಿಮ ತೀರ್ಮಾನ ಕೈಗೊಳ್ಳಲಾಗುವುದು ಎಂದು ಅವರು ತಿಳಿಸಿದರು.
|