ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಏರಿಕೆ ಹಿನ್ನೆಲೆಯಲ್ಲಿ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ ಬಸ್ ಪ್ರಯಾಣದರವನ್ನು ಶೇ.18ರಷ್ಟು ಹೆಚ್ಚಿಸಲು ಚಿಂತನೆ ನಡೆಸಿದೆ.
ಈ ಹಿನ್ನೆಲೆಯಲ್ಲಿ ಬಿ.ಎಂ.ಟಿ.ಸಿ. ಸೇರಿದಂತೆ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ ಬಸ್ ಪ್ರಯಾಣ ದರ ಹೆಚ್ಚಳವಾಗಲಿದೆ. ಸದ್ಯದ ಪರಿಸ್ಥಿತಿಯಲ್ಲಿ ಬಸ್ ಪ್ರಯಾಣ ದರ ಹೆಚ್ಚಿಸುವುದು ಅನಿವಾರ್ಯವಾಗಿದ್ದು, ಸಾರಿಗೆ ಸಂಸ್ಥೆಯ ಆಡಳಿತ ಮಂಡಳಿಯು ಪ್ರಯಾಣದರ ಏರಿಸುವಂತೆ ರಾಜ್ಯ ಸರಕಾರಕ್ಕೆ ಪ್ರಸ್ತಾವನೆ ಸಲ್ಲಿಸಿದೆ.
ತೈಲ ಬೆಲೆ ಏರಿಕೆಯಿಂದಾಗಿ ಸಾರಿಗೆ ಸಂಸ್ಥೆಗಳ ಮೇಲೆ 120 ಕೋಟಿ ರೂಪಾಯಿ ಹೊರಬಿದ್ದಿದೆ. ಇದರಿಂದಾಗಿ ಪ್ರಯಾಣ ದರ ಹೆಚ್ಚಿಸುವುದು ಅನಿವಾರ್ಯ. ಇತ್ತೀಚೆಗೆ ರಾಜ್ಯ ಸರಕಾರ ಡೀಸೆಲ್ ಮೇಲಿನ ಮಾರಾಟ ತೆರಿಗೆಯನ್ನು ಸ್ವಲ್ಪ ಮಟ್ಟಿಗೆ ಇಳಿಸಿದ್ದರೂ, ಯಾವುದೇ ಪ್ರಯೋಜನವಾಗಿಲ್ಲ ಎಂದು ಸಾರಿಗೆ ಸಂಸ್ಥೆ ಮೂಲಗಳು ಪ್ರಸ್ತಾವನೆಯಲ್ಲಿ ತಿಳಿಸಿವೆ.
|