ಮುಖ್ಯ ಪುಟ  ಸುದ್ದಿ ಜಗತ್ತು > ಸುದ್ದಿಗಳು > ರಾಜ್ಯ ಸುದ್ದಿ
ಸಲಹೆ/ಪ್ರತಿಕ್ರಿಯೆಮಿತ್ರನಿಗೆ ಕಳುಹಿಸಿಈ ಪುಟ ಮುದ್ರಿಸಿ
 
ಮುಂದುವರಿದ ಗೊಬ್ಬರ ಹಾಹಾಕಾರ  Search similar articles
ರಸಗೊಬ್ಬರಕ್ಕಾಗಿ ರೈತರ ಪ್ರತಿಭಟನೆ ಶನಿವಾರವೂ ಮುಂದುವರೆದಿದ್ದು, ರಸಗೊಬ್ಬರ ಪೂರೈಕೆಗಾಗಿ ರೈತರು ಬೀದಿಗಿಳಿದಿದ್ದಾರೆ.

ರಸಗೊಬ್ಬರ ಪೂರೈಕೆಗೆ ಒತ್ತಾಯಿಸಿ ಚನ್ನಗಿರಿಯ ಸರಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಿದ ರೈತರು, ಘರ್ಷಣೆಗಿಳಿದಿದ್ದು, ಕಚೇರಿ ಮೇಲೆ ಕಲ್ಲು ತೂರಾಟ ನಡೆಸಿದ್ದಾರೆ. ಇದರಿಂದಾಗಿ ಸ್ಥಳದಲ್ಲಿ ಪರಿಸ್ಥಿತಿ ಉದ್ವಿಗ್ನಗೊಂಡಿದೆ.

ಪರಿಸ್ಥಿತಿಯನ್ನು ನಿಯಂತ್ರಣದಲ್ಲಿಡುವ ಸಲುವಾಗಿ ಪೊಲೀಸರು ಲಾಠಿ ಪ್ರಹಾರ ನಡೆಸಿದ್ದಾರೆ. ಅಲ್ಲದೆ, ಸ್ಥಳಕ್ಕೆ ಹೆಚ್ಚಿನ ಪೊಲೀಸ್ ಬಿಗಿ ಬಂದೋಬಸ್ತ್ ಮಾಡಲಾಗಿದೆ. ಗಲಭೆಯ ಹಿನ್ನೆಲೆಯಲ್ಲಿ ಚನ್ನಗಿರಿಯಲ್ಲಿ ಅಂಗಡಿ ಮುಂಗಟ್ಟುಗಳನ್ನು ಮುಚ್ಚಲಾಗಿದ್ದು, ಬಸ್ ಸಂಚಾರ ಸಂಪೂರ್ಣ ಅಸ್ತವ್ಯಸ್ತಗೊಂಡಿದೆ.

ಈಗಾಗಲೇ ದಾವಣಗೆರೆಯಿಂದ ಹೆಚ್ಚಿನ ಪೊಲೀಸ್ ಸಿಬ್ಬಂದಿಯನ್ನು ಚನ್ನಗಿರಿಗೆ ಕರೆಸಿಕೊಳ್ಳಲಾಗಿದ್ದು, ಗಲಭೆ ನಿಯಂತ್ರಣಕ್ಕೆ ಹೆಚ್ಚಿನ ಕ್ರಮಗಳನ್ನು ಕೈಗೊಳ್ಳಲಾಗಿದೆ.
ಮತ್ತಷ್ಟು
ಸಭಾಪತಿ, ಉಪಸಭಾಪತಿ ಸ್ಥಾನ: ಮೈತ್ರಿ ಮುಂದರಿಕೆ
ಸಿದ್ದು ಬಂದರೆ ಬಿಜೆಪಿ ಸ್ವಾಗತಿಸುತ್ತದೆ: ಡಿವಿ
ಶೇ.18ರಷ್ಟು ಬಸ್ ಪ್ರಯಾಣ ದರ ಹೆಚ್ಚಳ?
ರಸಗೊಬ್ಬರ ಅಭಾವಕ್ಕೆ ಸರ್ಕಾರ ಕಾರಣ: ಬಂಗಾರಪ್ಪ
ಮಣಿಪಾಲ ಆಸ್ಪತ್ರೆಯಿಂದ ಹೃದ್ರೋಗ ಮಕ್ಕಳಿಗೆ ಹೊಸಜೀವನ
ಉದ್ಯಾನನಗರಿ ಇನ್ನು ಮುಂದೆ ಕ್ರೀಡಾ ನಗರಿ