ಮುಂದಿನ ತಿಂಗಳು 17ರಂದು ಮಂಡಿಸಲಿರುವ ಬಜೆಟ್‌ನಲ್ಲಿ ಶ್ರೀಸಾಮಾನ್ಯರ ಮೇಲೆ ತೆರಿಗೆ ಹೊರೆ ಇರುವುದಿಲ್ಲ ಎಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ತಿಳಿಸಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪಕ್ಷ ಪ್ರಣಾಳಿಕೆಯಲ್ಲಿ ನೀಡಿರುವ ಶೇ.75ರಷ್ಟು ಭರವಸೆಗಳನ್ನು ಮೊದಲ ಬಜೆಟ್‌ನಲ್ಲಿಯೇ ಈಡೇರಿಸಲು ಪ್ರಯತ್ನಿಸಲಾಗುವುದು. ಸರಕಾರದ ಆರ್ಥಿಕ ಇತಿಮಿತಿಯೊಳಗೆ ಬಜೆಟ್‌ಗೆ ಯೋಜನೆಗಳನ್ನು ರೂಪಿಸುವುದಾಗಿ ತಿಳಿಸಿದರು.
ಸರಕಾರ ಐದು ವರ್ಷ ಅವಧಿ ಪೂರ್ಣಗೊಳಿಸಲಿದೆ. ಸರಕಾರದ ಸ್ಥಿರತೆ ಬಗ್ಗೆ ಯಾರಿಗೂ ಅನುಮಾನ ಬೇಡ. ಜನರ ಆಶೀರ್ವಾದದೊಂದಿಗೆ ಐದು ವರ್ಷ ಜನಪರವಾಗಿ ಆಡಳಿತ ನಡೆಸುತ್ತೇವೆ ಎಂದು ಅವರು ಇದೇ ಸಂದರ್ಭದಲ್ಲಿ ತಿಳಿಸಿದರು.
ಈ ಮಧ್ಯೆ ಬಜೆಟ್‌ನಲ್ಲಿ ಆದ್ಯತಾ ವಲಯಗಳ ಕುರಿತು ಚರ್ಚೆ ನಡೆಸಲು ಮಖ್ಯಮಂತ್ರಿ ನೇತೃತ್ವದಲ್ಲಿ ಸೋಮವಾರ ಸಚಿವ ಸಂಪುಟದ ಸಭೆ ನಡೆಸಲಾಗಿದ್ದು, ಮುಖ್ಯಮಂತ್ರಿ ಬಜೆಟ್ ಕುರಿತು ಮಾತುಕತೆ ನಡೆಸಿದ್ದಾರೆ.
|