ರಸಗೊಬ್ಬರ ಕೊರತೆ ನಿರ್ವಹಣೆಯಲ್ಲಿ ಸರಕಾರ ವಿಫಲವಾಗಿರುವುದನ್ನು ನೋಡಿದರೆ ಮುಖ್ಯಮಂತ್ರಿ ಯಡಿಯೂರಪ್ಪನವರಿಗೆ ಅಧಿಕಾರ ನಿರ್ವಹಣೆಯಲ್ಲಿ ಅನುಭವ ಸಾಲದು ಎಂಬುದು ಸಾಬೀತಾಗಿದೆ ಎಂದು ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡ ಹೇಳಿದ್ದಾರೆ.
ನಗರದಲ್ಲಿ ಸೋಮವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಸಗೊಬ್ಬರ ವಿಚಾರದಲ್ಲಿ ರಾಜಕೀಯ ಮಾಡುವ ಅಗತ್ಯ ಜೆಡಿಎಸ್ ಪಕ್ಷಕ್ಕಿಲ್ಲ. ಅದರೆ ಸರಕಾರ ನಡೆದುಕೊಳ್ಳುತ್ತಿರುವ ನೀತಿ ನೋಡಿದರೆ, ಬೇಸರವಾಗುತ್ತದೆ ಎಂದು ಸರಕಾರದ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದರು.
ಗೊಬ್ಬರದಿಂದಾಗಿ ಆಗಿರುವ ಅಚಾತುರ್ಯದ ಕುರಿತು ಸ್ವತಃ ಮುಖ್ಯಮಂತ್ರಿಗಳೇ ಒಪ್ಪಿಕೊಂಡಿದ್ದರೂ, ಇತ್ತ ಬಿಜೆಪಿ ಕಾರ್ಯಕರ್ತರು ರಸಗೊಬ್ಬರದ ಕೊರತೆ ಬಗ್ಗೆ ಕೇಂದ್ರ ಸರಕಾರದ ವಿರುದ್ಧ ಪ್ರತಿಭಟನೆ ನಡೆಸುತ್ತಿದ್ದಾರೆ. ಇದು ಮುಖ್ಯಮಂತ್ರಿಯವರ ದ್ವಿಮುಖ ನೀತಿಯನ್ನು ತೋರುತ್ತದೆ ಎಂದು ನುಡಿದರು.
ಗೊಬ್ಬರ ಕೊರತೆ ನೀಗಿಸುವ ಕುರಿತು ಕೇಂದ್ರ ಕೃಷಿ ಸಚಿವರನ್ನೇ ಮುಖ್ಯಮಂತ್ರಿ ಭೇಟಿ ಮಾಡಿಲ್ಲ ಎಂದು ಆರೋಪಿಸಿದ ಅವರು, ಗುಜರಾತ್‌ನಲ್ಲಿ ದಾಸ್ತಾನಿರುವ ರಸಗೊಬ್ಬರ ತರಿಸಿಕೊಳ್ಳಲಿ ಎಂದು ಅವರು ಆಗ್ರಹಿಸಿದರು.
|