ಹಾವೇರಿ ಗೋಲಿಬಾರ‌್‌ಗೆ ಬಿಜೆಪಿ ಕಾರ್ಯಕರ್ತರೇ ಪ್ರಮುಖ ಕಾರಣ ಎಂದು ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಆರೋಪಿಸಿದ್ದಾರೆ.
ರಸಗೊಬ್ಬರಕ್ಕಾಗಿ ಹಾವೇರಿಯಲ್ಲಿ ನಡೆದ ಗಲಭೆಗೆ ಅಮಾಯಕ ರೈತರು ಕಾರಣರಲ್ಲ. ಬಿಜೆಪಿ ಕಾರ್ಯಕರ್ತರೇ ನೇರ ಹೊಣೆ ಎಂದು ಅವರು ಸದನದಲ್ಲಿ ಬಿಜೆಪಿಯನ್ನು ತರಾಟೆಗೆ ತೆಗೆದುಕೊಂಡಿದ್ದಾರೆ.
ಗೊಬ್ಬರ ಕೊರತೆಗಾಗಿ ಹಾವೇರಿಯಲ್ಲಿ ಪ್ರತಿಭಟನೆ ನಡೆದ ದಿನ ಬಿಜೆಪಿ ಕಾರ್ಯಕರ್ತರು ತೈಲ ಬೆಲೆ ಏರಿಕೆ ವಿರೋಧಿಸಿ ಕೇಂದ್ರ ಸರ್ಕಾರದ ವಿರುದ್ಧ ಪ್ರತಿಭಟನೆ ನಡೆಸಿದ್ದರು. ಈ ಕಾರ್ಯಕರ್ತರೇ ಬೆಂಕಿ ಹಚ್ಚಿ ಗಲಭೆ ನಡೆಸಿದ್ದರು ಎಂದು ಅವರು ಆರೋಪಿಸಿದ್ದಾರೆ.
ಆದರೆ, ಈ ಸಂದರ್ಭದಲ್ಲಿ ಬಿಜೆಪಿ ಕಾರ್ಯಕರ್ತರ ಮೇಲೆ ಕ್ರಮ ಕೈಗೊಳ್ಳದ ಪೊಲೀಸರು ರಸಗೊಬ್ಬರ ಸ್ವೀಕರಿಸಲು ಬಂದಿದ್ದ ರೈತರ ಮೇಲೆ ಲಾಠಿ ಪ್ರಹಾರ ನಡೆಸಿ, ಗುಂಡು ಹಾರಿಸಿದ್ದಾರೆ ಎಂದು ಅವರು ಆರೋಪಿಸಿದರು.
|