ರಾಜ್ಯದೆಲ್ಲೆಡೆ ಉದ್ಭವಿಸಿರುವ ರಸಗೊಬ್ಬರ ಸಮಸ್ಯೆ ಕುರಿತಾದ ಚರ್ಚೆ ಎರಡನೇ ದಿನದ ಅಧಿವೇಶನದಲ್ಲಿ ಮತ್ತೆ ಮುಂದುವರೆದಿದ್ದು, ಆಡಳಿತ ಪಕ್ಷದ ಮೇಲೆ ಪ್ರತಿಪಕ್ಷಗಳು ತೀವ್ರ ವಾಗ್ದಾಳಿ ನಡೆಸಿವೆ.
ಸರಕಾರರ ನೇರವಾಗಿ ಗೊಬ್ಬರ ಕಂಪೆನಿಗಳ ಜೊತೆ ಸಂಪರ್ಕ ಕಲ್ಪಿಸಬೇಕು. ಅಲ್ಲದೆ, ರೈತರ ವಿಚಾರದಲ್ಲಿ ರಾಜಕೀಯ ಮಾಡದೆ, ಪ್ರತಿಪಕ್ಷಗಳ ಜೊತೆ ಸೇರಿ ಒಗ್ಗಟ್ಟಿನಿಂದ ಸಮಸ್ಯೆಗೆ ಪರಿಹಾರ ಕಂಡುಕೊಳ್ಳಬೇಕೆಂದು ಪ್ರತಿಪಕ್ಷಗಳು ಸರ್ಕಾರಕ್ಕೆ ಮನವಿ ಮಾಡಿವೆ.
ಇದೇ ಸಂದರ್ಭದಲ್ಲಿ ಮಾತನಾಡಿದ ಮಾಜಿ ಸಚಿವ ಬಂಡೆಪ್ಪ ಕಾಶೆಂಪುರ್, ರಾಜ್ಯದಲ್ಲಿ ರೈತರಿಗಾಗಿರುವ ಸಮಸ್ಯೆ ಕುರಿತು ಚರ್ಚಿಸಲು 15 ದಿನಗಳ ವಿಶೇಷ ಅಧಿವೇಶನ ನಡೆಸುವಂತೆ ಸರ್ಕಾರಕ್ಕೆ ಸಲಹೆ ನೀಡಿದರು.
ಬಿತ್ತನೆ ಬೀಜ, ರಸಗೊಬ್ಬರ ಸಮಸ್ಯೆ ಕುರಿತು ಅಧಿವೇಶನದಲ್ಲಿ ಚರ್ಚೆ ನಡೆಸಿ ರೈತರ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳಲು ಕ್ರಮಕೈಗೊಳ್ಳಬೇಕೆಂದು ಅವರು ತಿಳಿಸಿದರು.
|