ಕರ್ನಾಟಕ ವಿಶ್ವವಿದ್ಯಾಲಯ ವ್ಯಾಪ್ತಿಗೆ ಬರುವ ಗದಗ್ ವಿಶ್ವವಿದ್ಯಾಲಯದಲ್ಲಿ ಪ್ರಶ್ನೆ ಪ್ರತಿಕೆ ಬಯಲಾಗಿದ್ದು, ಬುಧವಾರ ನಡೆಯಬೇಕಿದ್ದ ಪರೀಕ್ಷೆ ಮುಂದೂಡುವ ಸಾಧ್ಯತೆಗಳಿವೆ.
ಬ್ಯಾಚುರಲ್ ಆಫ್ ಕಂಪ್ಯೂಟರ್ ಸೈನ್ಸ್ ತರಗತಿಯ ಮಾನವ ಹಕ್ಕುಗಳು ಹಾಗೂ ಪರಿಸರ ಕುರಿತಾದ ಪರೀಕ್ಷೆ ಪ್ರಶ್ನೆಪತ್ರಿಕೆ ಬಯಲಾಗಿದ್ದು, ಹಣಕ್ಕಾಗಿ ಪ್ರಶ್ನೆ ಪತ್ರಿಕೆ ಮಾರಾಟ ಮಾಡಿದ್ದಾರೆ. ಒಂದು ಪ್ರತಿಗೆ 500ರಿಂದ 1000 ರೂ.ಗಳ ವರೆಗೆ ಹಣ ಪಡೆದುಕೊಳ್ಳುತ್ತಿದ್ದರು ಎಂದು ತಿಳಿದು ಬಂದಿದೆ.
ಇಂದು ಮದ್ಯಾಹ್ನ ಎರಡು ಗಂಟೆಗೆ ಪರೀಕ್ಷೆ ನಡೆಯಬೇಕಿತ್ತು. ಆದರೆ ಪರೀಕ್ಷೆಗೂ ಮೊದಲೇ ಪ್ರಶ್ನೆ ಪತ್ರಿಕೆಗಳು ಬಯಲಾಗಿದೆ. ಇದರಿಂದ ವಿದ್ಯಾರ್ಥಿಗಳು ಆತಂಕಗೊಂಡಿದ್ದಾರೆ.
ಈ ಬಗ್ಗೆ ವಿಶ್ವವಿದ್ಯಾನಿಯಲದ ಅಧಿಕಾರಿಗಳಲ್ಲಿ ವಿಚಾರಿಸಿದಾಗ ಪರೀಕ್ಷೆ ರದ್ದು ಕುರಿತು ತೀರ್ಮಾನಿಸಲಾಗುವುದು ಎಂದು ಉತ್ತರ ನೀಡಿದ್ದಾರೆ. ಇಂದು ಧಾರವಾಡದ ವಿಶ್ವವಿದ್ಯಾಲಯದ ವ್ಯಾಪ್ತಿಗೆ ಬರುವ ಎಲ್ಲಾ ಕಾಲೇಜುಗಳಲ್ಲಿಯೂ ಪರೀಕ್ಷೆ ನಡೆಯಬೇಕಿದೆ. ಆದರೆ ಗದಗದಲ್ಲಿ ಪ್ರಶ್ನೆ ಪತ್ರಿಕೆ ಬಯಲಾಗಿರುವುದರಿಂದ ವಿಶ್ವವಿದ್ಯಾಲಯ ಪರೀಕ್ಷೆ ನಡೆಸುತ್ತಾರೆಯೇ ಎಂಬ ಗೊಂದಲದಲ್ಲಿ ವಿದ್ಯಾರ್ಥಿಗಳಿದ್ದಾರೆ.
|