ಮುಖ್ಯ ಪುಟ  ಸುದ್ದಿ ಜಗತ್ತು > ಸುದ್ದಿಗಳು > ರಾಜ್ಯ ಸುದ್ದಿ
ಸಲಹೆ/ಪ್ರತಿಕ್ರಿಯೆಮಿತ್ರನಿಗೆ ಕಳುಹಿಸಿಈ ಪುಟ ಮುದ್ರಿಸಿ
 
ರಸಗೊಬ್ಬರ: ದೆಹಲಿಗೆ ನಿಯೋಗ  Search similar articles
ವಿಧಾನಸಭೆಯಲ್ಲಿಂದು ಪ್ರತಿಪಕ್ಷ ಸದಸ್ಯರು ರಸಗೊಬ್ಬರ ಸಮಸ್ಯೆ ವಿರುದ್ಧ ಧರಣಿ ನಡೆಸಿದ ಸಂದರ್ಭದಲ್ಲಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪನವರು ದೆಹಲಿಗೆ ಸರ್ವಪಕ್ಷ ನಿಯೋಗ ಕರೆದುಕೊಂಡು ಹೋಗಲು ತಾವು ಸಿದ್ಧರಿರುವುದಾಗಿ ತಿಳಿಸಿದರು.

ವಿಧಾನಮಂಡಲದಲ್ಲಿ ನಡೆದ ಕಲಾಪದ ಸಂದರ್ಭದಲ್ಲಿ ಪ್ರತಿಪಕ್ಷಗಳ ಪ್ರಶ್ನೆಗೆ ಉತ್ತರಿಸಿದ ಅವರು, ರಸಗೊಬ್ಬರದ ವಿಷಯವಾಗಿ ಉಂಟಾಗಿರುವ ಸಮಸ್ಯೆ ನಿವಾರಣೆಗೆ ಗುರುವಾರ ರಾಜ್ಯದ ಮುಖ್ಯ ಕಾರ್ಯದರ್ಶಿ ಸುಧಾಕರ್ ನೇತೃತ್ವದಲ್ಲಿ ರಾಜ್ಯ ನಿಯೋಗವೊಂದು ದೆಹಲಿಗೆ ತೆರಳಲಿದ್ದು, ಪ್ರಧಾನ ಮಂತ್ರಿ ಮನಮೋಹನ್ ಸಿಂಗ್ ಅವರನ್ನು ಭೇಟಿ ಮಾಡಲಿದ್ದಾರೆ ಎಂದು ತಿಳಿಸಿದರು.

ರಸಗೊಬ್ಬರದ ಸಮರ್ಪಕ ವಿತರಣೆಗಾಗಿ ಈಗಾಗಲೇ ಕ್ರಮ ಕೈಗೊಳ್ಳಲಾಗಿದ್ದು, ಕಾಳಸಂತೆಯಲ್ಲಿ ಬಿತ್ತನೆ ಬೀಜ ಹಾಗೂ ಅಕ್ರಮ ಗೊಬ್ಬರ ದಾಸ್ತಾನು ಮಾಡುವವರ ವಿರುದ್ಧ ಕ್ರಮ ಕೈಗೊಳ್ಳಲು ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ ಎಂದು ಅವರು ತಿಳಿಸಿದರು.

ರೈತರ ಆತ್ಮಹತ್ಯೆ ನಡೆದಲ್ಲಿ ತಕ್ಷಣ ಉಪ ವಿಭಾಗ ನ್ಯಾಯಾಧೀಶರು ಸ್ಥಳಕ್ಕೆ ಭೇಟಿ ನೀಡಿ ಆತ್ಮಹತ್ಯೆಯ ಕಾರಣ ಪರೀಶೀಲಿಸಿ ವರದಿ ಸಲ್ಲಿಸುವಂತೆ ಕ್ರಮಕೈಗೊಳ್ಳುವುದಾಗಿ ಅವರು ಇದೇ ಸಂದರ್ಭದಲ್ಲಿ ತಿಳಿಸಿದರು.
ಮತ್ತಷ್ಟು
ಹಳ್ಳಿ ಹಕ್ಕಿಯ ಹಾಡು ಇಂಗ್ಲೀಷ್‌ಗೆ
ರಸಗೊಬ್ಬರ ಧರಣಿಯೊಂದಿಗೆ ಕೊನೆಗೊಂಡ ಅಧಿವೇಶನ
ಎಸ್‌ಐ ಅನಿಲ್ ಕುಮಾರ್ ಬಂಧನ
ಗದಗ: ಪ್ರಶ್ನೆ ಪತ್ರಿಕೆ ಬಯಲು
ವಿಧಾನಸಭಾ ಅಧಿವೇಶನಕ್ಕೆ ಇಂದು ತೆರೆ
ರಸಗೊಬ್ಬರ ರಾಷ್ಟ್ರೀಯ ಸಮಸ್ಯೆ: ಸಿಎಂ