ಮುಖ್ಯ ಪುಟ  ಸುದ್ದಿ ಜಗತ್ತು > ಸುದ್ದಿಗಳು > ರಾಜ್ಯ ಸುದ್ದಿ
ಸಲಹೆ/ಪ್ರತಿಕ್ರಿಯೆಮಿತ್ರನಿಗೆ ಕಳುಹಿಸಿಈ ಪುಟ ಮುದ್ರಿಸಿ
 
ಅಣುಒಪ್ಪಂದ-ಬಿಕ್ಕಟ್ಟು ಇಲ್ಲ-ಆಸ್ಕರ್ ಫೆರ್ನಾಂಡೀಸ್  Search similar articles
ಭಾರತ-ಅಮೆರಿಕ ಪರಮಾಣು ಒಪ್ಪಂದಕ್ಕೆ ಸಂಬಂಧಿಸಿದಂತೆ ಯುಪಿಎ ಹಾಗೂ ಎಡಪಕ್ಷಗಳ ನಡುವೆ ಬಿಕ್ಕಟ್ಟು ಉಂಟಾಗಿಲ್ಲ ಎಂದು ಕಾಂಗ್ರೆಸ್ ಮುಖಂಡ ಅಸ್ಕಾರ್ ಫೆರ್ನಾಂಡೀಸ್ ಸ್ಪಷ್ಟಪಡಿಸಿದ್ದಾರೆ.

ಸ್ಥಳೀಯ ಸಂಸ್ಥೆ ಚುನಾವಣೆಗೆ ಮತಚಲಾಯಿಸಲು ಬಂದ ಸಂದರ್ಭದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಅಣು ಒಪ್ಪಂದ ಕುರಿತು ಸರ್ಕಾರಕ್ಕೆ ಯಾವುದೇ ರೀತಿಯ ಅಭದ್ರತೆ ಇಲ್ಲ ಎಂದು ತಿಳಿಸಿದ್ದಾರೆ.

ಈ ಬಗ್ಗೆ ಈಗಾಗಲೇ ಎಡಪಕ್ಷಗಳೊಂದಿಗೆ ಮಾತುಕತೆ ನಡೆಸಲಾಗಿದ್ದು, ಸಮಸ್ಯೆಗೆ ಶೀಘ್ರ ಪರಿಹಾರ ಕಂಡುಕೊಳ್ಳಲಾಗುವುದು. ಅಂತೆಯೇ ಮಿತ್ರ ಪಕ್ಷಗಳೊಂದಿಗೂ ಅಣು ಒಪ್ಪಂದದ ಕುರಿತು ಕಾಂಗ್ರೆಸ್ ಚರ್ಚೆ ನಡೆಸುತ್ತಿದೆ ಎಂದು ಅವರು ತಿಳಿಸಿದರು.

ವಿಧಾನಪರಿಷತ್ ಚುನಾವಣೆ
ರಾಜ್ಯದಲ್ಲಿ ನಡೆಯುತ್ತಿರುವ ಶಿಕ್ಷಕರ ಮತ್ತು ಪದವೀಧರ ಕ್ಷೇತ್ರಗಳ ಚುನಾವಣೆ ಮಂದಗತಿಯಲ್ಲಿ ಸಾಗಿದ್ದು, ಪಶ್ಚಿಮ ಪದವೀಧರ ಕ್ಷೇತ್ರದಲ್ಲಿ ಶೇ 31.58ರಷ್ಟು ಮತದಾನವಾಗಿದೆ. ಅಂತೆಯೇ ಆಗ್ನೇಯ ಪದವೀಧರ ಕ್ಷೇತ್ರದಲ್ಲಿ ಶೇ. 27, ಬೆಂಗಳೂರು ಶಿಕ್ಷಕರ ಕ್ಷೇತ್ರದಲ್ಲಿ ಶೇ.43.8 ಹಾಗೂ ಈಶಾನ್ಯ ಕ್ಷೇತ್ರದಲ್ಲಿ ಶೇ.20ರಷ್ಟು ಮತದಾನವಾಗಿರುವ ಬಗ್ಗೆ ಮಾಹಿತಿ ಲಭಿಸಿದೆ.

ಹಾಗೆಯೇ ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ಇದುವರೆಗೆ ಶೇ. 65ರಷ್ಟು ಮತದಾನವಾಗಿದೆ. ಮತದಾನದ ವೇಳೆ ಸಣ್ಣಪುಟ್ಟ ಘಟನೆಗಳನ್ನು ಹೊರತು ಪಡಿಸಿದರೆ ಉಳಿದಂತೆ ಶಾಂತಿಯುತ ಮತದಾನವಾಗಿರುವ ಕುರಿತು ವರದಿ ಬಂದಿದೆ.
ಮತ್ತಷ್ಟು
ಕಾಂಗ್ರೆಸ್ ಬಗ್ಗೆ ಅಸಮಾಧಾನವಿಲ್ಲ: ಸಿದ್ದರಾಮಯ್ಯ
ಶಿಕ್ಷಕರ, ಪದವೀಧರ ಕ್ಷೇತ್ರಕ್ಕೆ ಚುರುಕಿನ ಮತದಾನ
ಬಿಎಸ್‌ಪಿಯಲ್ಲಿ ಮೇಜರ್ ಸರ್ಜರಿ
ಮುಖ್ಯಮಂತ್ರಿ ರಾಜೀನಾಮೆಗೆ ಕುಮಾರ್ ಒತ್ತಾಯ
ಪದವೀಧರ ಕ್ಷೇತ್ರ ಚುನಾವಣಾ ಪೈಪೋಟಿ
ರಸಗೊಬ್ಬರ: ದೆಹಲಿಗೆ ನಿಯೋಗ