ಮುಖ್ಯ ಪುಟ  ಸುದ್ದಿ ಜಗತ್ತು > ಸುದ್ದಿಗಳು > ರಾಜ್ಯ ಸುದ್ದಿ
ಸಲಹೆ/ಪ್ರತಿಕ್ರಿಯೆಮಿತ್ರನಿಗೆ ಕಳುಹಿಸಿಈ ಪುಟ ಮುದ್ರಿಸಿ
 
ಪ್ರವಾಸೋದ್ಯಮ ಅಭಿವೃದ್ದಿಗಾಗಿ ಕ್ರಮ:ಜನಾರ್ದನ ರೆಡ್ಡಿ  Search similar articles
ರಾಜ್ಯಕ್ಕೆ ಭೇಟಿ ನೀಡುವ ದೇಶೀಯ ಹಾಗೂ ವಿದೇಶಿ ಪ್ರವಾಸಿಗರನ್ನು ಆಕರ್ಷಿಸುವ ಸಲುವಾಗಿ ರಾಜ್ಯ ಪ್ರವಾಸೋದ್ಯಮವನ್ನು ಅಭಿವೃದ್ದಿ ಪಡಿಸಲು ಕ್ರಮ ಕೈಗೊಳ್ಳುವುದಾಗಿ ಪ್ರವಾಸೋದ್ಯಮ ಸಚಿವ ಜನಾರ್ದನ ರೆಡ್ಡಿ ತಿಳಿಸಿದ್ದಾರೆ.

ಪ್ರವಾಸೋದ್ಯಮ ಇಲಾಖೆಯ ಅಧಿಕಾರಿಗಳ ಜೊತೆ ಸಭೆ ನಡೆಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈ ಬಾರಿಯ ಬಜೆಟ್‌ನಲ್ಲಿ ಪ್ರವಾಸೋದ್ಯಮ ಇಲಾಖೆಗೆ ಕಳೆದ ಬಾರಿಗಿಂತ ಅತಿ ಹೆಚ್ಚಿನ ಪ್ರಮಾಣದ ಹಣ ನಿಗದಿ ಮಾಡುವಂತೆ ಮುಖ್ಯಮಂತ್ರಿಗಳಿಗೆ ಮನವಿ ಮಾಡಲಾಗಿದೆ ಎಂದು ತಿಳಿಸಿದರು.

ರಾಜ್ಯಕ್ಕೆ ಭೇಟಿ ನೀಡುವ ದೇಶೀಯ ಹಾಗೂ ವಿದೇಶಿ ಪ್ರವಾಸಿಗರ ಸಂಖ್ಯೆ ಎಷ್ಟು ಎಂಬುದನ್ನು ಪತ್ತೆ ಮಾಡಲು ಪ್ರಸಕ್ತ ವರ್ಷದಿಂದ ಪ್ರವಾಸಿಗರ ಗಣತಿ ನಡೆಸಲಾಗುವುದು ಎಂದು ಅವರು ಇದೇ ಸಂದರ್ಭದಲ್ಲಿ ತಿಳಿಸಿದರು.

ರಾಜ್ಯದ ಪ್ರಮುಖ ಪ್ರವಾಸಿ ತಾಣಗಳಾದ ಗೋಕರ್ಣ ಹಾಗೂ ಹಂಪಿಯಲ್ಲಿ ಎಲ್ಲ ವರ್ಗದ ಜನರಿಗಾಗಿ ಹೊಟೇಲ್, ಅಮ್ಯೂಸ್ಮೆಂಟ್ ಪಾರ್ಕ್ ನಿರ್ಮಾಣಕ್ಕಾಗಿ ಜಾಗತಿಕ ಟೆಂಡರ್ ಕರೆಯಲು ಉದ್ದೇಶಿಸಲಾಗಿದೆ. ಅಲ್ಲದೆ, ಪ್ರವಾಸಿಗರ ಸುರಕ್ಷತೆಗೆ ಹಸಿರು ಪಡೆಗಳನ್ನು ನಿಯೋಜಿಸಲಾಗುವುದು ಎಂದು ಅವರು ತಿಳಿಸಿದರು.
ಮತ್ತಷ್ಟು
10 ಕಡೆಗಳಲ್ಲಿ ಲೋಕಾಯುಕ್ತರ ದಾಳಿ
ಅಣು ಒಪ್ಪಂದ ಅನಿವಾರ್ಯ:ಕಲಾಂ
ಕೆಪಿಸಿಸಿ ಅಧ್ಯಕ್ಷ ಸ್ಥಾನ ವಹಿಸಲು ಸಿದ್ಧ: ವಿಶ್ವನಾಥ್
ನಕಲಿ ಮತದಾನಕ್ಕೆ ಯತ್ನಿಸಿದ ಇಬ್ಬರ ಬಂಧನ
ವಿಧಾನ ಪರಿಷತ್‌ಗೆ ಶೇ.75.6 ಮತದಾನ
ಜೋಡಿ ಕೊಲೆ: ಎಂಟು ಮಂದಿಯ ಬಂಧನ