ಬಿಜೆಪಿ ನೇತೃತ್ವದ ರಾಜ್ಯ ಸರ್ಕಾರದ ಭದ್ರತೆಗಾಗಿ ಏನು ಮಾಡಲು ಸಿದ್ದವಿರುವುದಾಗಿ ತಿಳಿಸಿರುವ ಇಂಧನ ಸಚಿವ ಕೆ. ಎಸ್. ಈಶ್ವರಪ್ಪ, ಇದಕ್ಕಾಗಿ ಜೆಡಿಎಸ್-ಕಾಂಗ್ರೆಸ್ ಪಕ್ಷವನ್ನು ಒಡೆಯಲು ಸಿದ್ದವಿರುವುದಾಗಿ ತಿಳಿಸಿದ್ದಾರೆ.
ಶುಕ್ರವಾರ ನಗರದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಜಕೀಯದಲ್ಲಿ 25 ವರ್ಷಗಳ ಅನುಭವವಿದೆ. ಸರ್ಕಾರ ಐದು ವರ್ಷ ಸುಸ್ಥಿತಿಯಿಂದ ಬಾಳುವಂತೆ ಮಾಡಲು ಯಾವುದೇ ಕ್ರಮಕ್ಕೆ ಸಿದ್ದವಿರುವುದಾಗಿ ತಿಳಿಸಿದರು.
ರೈತರ ಪಂಪ್‌ಸೆಟ್‌ಗಳಿಗೆ ಉಚಿತ ವಿದ್ಯುತ್ ನೀಡಲಾಗುವುದು. ಈ ನಿಟ್ಟಿನಲ್ಲಿ ರೈತರ ಪಂಪ್‌ಸೆಟ್‌ಗಳಿಗೆ ವಿದ್ಯುತ್ ಮೀಟರ್‌ಗಳನ್ನು ಅಳವಡಿಸಲಾಗುವುದು ಎಂದು ಇದೇ ಸಂದರ್ಭದಲ್ಲಿ ತಿಳಿಸಿದ ಅವರು, ಎಲ್ಲ ಕಡೆಗಳಲ್ಲಿಯೂ 24 ಗಂಟೆಯೂ ವಿದ್ಯುತ್ ನೀಡುವ ಕುರಿತು ಸರ್ಕಾರ ಚಿಂತನೆ ನಡೆಸಿದೆ ಎಂದು ತಿಳಿಸಿದರು.
ನಾಗಾರ್ಜುನ ವಿದ್ಯುತ್ ಯೋಜನೆ ಸೇರಿದಂತೆ ಹಲವು ವಿದ್ಯುತ್ ಯೋಜನೆಗಳ ಅನುಷ್ಠಾನಕ್ಕೆ ಶೀಘ್ರವೇ ಕ್ರಮ ಕೈಗೊಳ್ಳುವುದು. ಅಲ್ಲದೆ, ರಾಜ್ಯದಲ್ಲಿ ವಿದ್ಯುತ್ ಕೊರತೆ ನೀಗಿಸಲು ರಾಜ್ಯ ಸರ್ಕಾರ ಶ್ರಮವಹಿಸುತ್ತದೆ ಎಂದು ಅವರು ಸ್ಪಷ್ಟಪಡಿಸಿದರು.
|