ಮುಖ್ಯ ಪುಟ  ಸುದ್ದಿ ಜಗತ್ತು > ಸುದ್ದಿಗಳು > ರಾಜ್ಯ ಸುದ್ದಿ
ಸಲಹೆ/ಪ್ರತಿಕ್ರಿಯೆಮಿತ್ರನಿಗೆ ಕಳುಹಿಸಿಈ ಪುಟ ಮುದ್ರಿಸಿ
 
ರಸಗೊಬ್ಬರದ ಅಭಾವವಿಲ್ಲ: ದೇವೇಗೌಡ  Search similar articles
ರಾಜ್ಯದಲ್ಲಿ ಅಗತ್ಯಕ್ಕಿಂತ ಹೆಚ್ಚು ರಸಗೊಬ್ಬರ ಇದ್ದು, ಅದನ್ನು ಸಮರ್ಪಕವಾಗಿ ವಿಲೇವಾರಿ ಮಾಡುವಲ್ಲಿ ರಾಜ್ಯಸರ್ಕಾರ ವಿಫಲವಾಗಿದೆ ಎಂದು ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡ ಗುಡುಗಿದ್ದಾರೆ.

ನಗರದಲ್ಲಿ ಶುಕ್ರವಾರ ಪತ್ರಿಕಾಗೋಷ್ಠಿ ನಡೆಸಿದ ಅವರು, ರಾಜ್ಯದಲ್ಲಿ ರೈತರಿಗೆ ಬೇಕಾದಷ್ಟು ರಸಗೊಬ್ಬರ ಇದೆ. ಅದಕ್ಕಾಗಿ ಕೇಂದ್ರಕ್ಕೆ ನಿಯೋಗ ಕಳಿಸುವ ಅಗತ್ಯವಿಲ್ಲ ಎಂದು ತಿಳಿಸಿದರು.

ರಸಗೊಬ್ಬರ ದಾಸ್ತಾನಿಗೆ ಸಂಬಂಧಪಟ್ಟ ದಾಖಲೆಗಳನ್ನು ಪ್ರದರ್ಶಿಸಿದ ಅವರು, ದಾಸ್ತಾನು ಇರುವ ರಸಗೊಬ್ಬರ ಸಮರ್ಪಕವಾಗಿ ಬಳಸುವಲ್ಲಿ ಬಿಜೆಪಿ ನೇತೃತ್ವದ ರಾಜ್ಯ ಸರ್ಕಾರ ವಿಫಲವಾಗಿದೆ. ಇದರಿಂದ ರಾಜ್ಯದ ಅಭಿವೃದ್ದಿ ಕುಂಠಿತವಾಗಿದೆ ಎಂದು ಸರ್ಕಾರವನ್ನು ತೀವ್ರ ತರಾಟೆಗೆ ತೆಗೆದುಕೊಂಡರು.

ಈ ಮಧ್ಯೆ ಸರ್ಕಾರದ ಭದ್ರತೆಗಾಗಿ ಕಾಂಗ್ರೆಸ್-ಜೆಡಿಎಸ್ ಪಕ್ಷವನ್ನು ಒಡೆಯಲು ಸಿದ್ದವಿರುವುದಾಗಿ ತಿಳಿಸಿದ ಸಚಿವ ಕೆ.ಎಸ್. ಈಶ್ವರಪ್ಪ ಹೇಳಿಕೆಗೆ ಪ್ರತಿಕ್ರಿಯಿಸಲು ದೇವೇಗೌಡರು ನಿರಾಕರಿಸಿದ್ದಾರೆ.
ಮತ್ತಷ್ಟು
ಕಾಂಗ್ರೆಸ್-ಜೆಡಿಎಸ್ ಒಡೆಯಲು ಸಿದ್ದ:ಈಶ್ವರಪ್ಪ
ಪ್ರವಾಸೋದ್ಯಮ ಅಭಿವೃದ್ದಿಗಾಗಿ ಕ್ರಮ:ಜನಾರ್ದನ ರೆಡ್ಡಿ
10 ಕಡೆಗಳಲ್ಲಿ ಲೋಕಾಯುಕ್ತರ ದಾಳಿ
ಅಣು ಒಪ್ಪಂದ ಅನಿವಾರ್ಯ:ಕಲಾಂ
ಕೆಪಿಸಿಸಿ ಅಧ್ಯಕ್ಷ ಸ್ಥಾನ ವಹಿಸಲು ಸಿದ್ಧ: ವಿಶ್ವನಾಥ್
ನಕಲಿ ಮತದಾನಕ್ಕೆ ಯತ್ನಿಸಿದ ಇಬ್ಬರ ಬಂಧನ