ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ವ್ಯಾಪಿಸಿರುವ ಚಿಕೂನ‌್‌ಗುನ್ಯಾ ಈಗ ನಗರದಲ್ಲೂ ಕಾಣಿಸಿಕೊಂಡಿದ್ದು, ನಾಗರಿಕರನ್ನು ಆತಂಕಕ್ಕೀಡು ಮಾಡಿದೆ.
ನಗರದಲ್ಲಿ ಇದುವರೆಗೆ ಚಿಕೂನ‌್‌ಗುನ್ಯಾ ಕಾಯಿಲೆಗೆ ಸಂಬಂಧಪಟ್ಟಂತೆ 400 ಪ್ರಕರಣಗಳು ಪತ್ತೆಯಾಗಿವೆ. ಇದರಲ್ಲಿ 50ಕ್ಕೂ ಹೆಚ್ಚು ಜನರಿಗೆ ರೋಗ ಇರುವುದು ದೃಢಪಟ್ಟಿದೆ. ಅಲ್ಲದೆ, ಸುಮಾರು100ಕ್ಕೂ ಹೆಚ್ಚು ಜನರಿಗೆ ಚಿಕೂನ‌್‌ಗುನ್ಯಾ ಕಾಯಿಲೆ ಇರುವ ಶಂಕೆ ವ್ಯಕ್ತವಾಗಿದ್ದು, ಇವರು ಕೆಸಿ ಜನರಲ್ ಆಸ್ಪತ್ರೆ ಸೇರಿದಂತೆ ಹಲವು ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ನಗರದ ಶ್ರೀರಾಮಪುರ, ಭಾಷ್ಯಂ ನಗರದ ಅಕ್ಕಪಕ್ಕದ ಪ್ರದೇಶಗಳಲ್ಲಿ ಚಿಕೂನ‌್‌ಗುನ್ಯಾ ಕಾಣಿಸಿಕೊಂಡಿದ್ದು, ರೋಗಿಗಳಿಗೆ ವಿಶೇಷ ಔಷಧಿಗಳನ್ನು ನೀಡಲಾಗುತ್ತಿದೆ ಎಂದು ಆರೋಗ್ಯ ಇಲಾಖೆ ತಿಳಿಸಿದೆ.
ಈ ಹಿನ್ನೆಲೆಯಲ್ಲಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಶ್ರೀರಾಮುಲು ಹಿರಿಯ ಅಧಿಕಾರಿಗಳೊಂದಿಗೆ ಚರ್ಚೆ ನಡೆಸಿ ಚಿಕೂನ‌್‌ಗುನ್ಯಾ ನಿಯಂತ್ರಣಕ್ಕೆ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಬೇಕೆಂದು ಸೂಚನೆ ನೀಡಿದ್ದಾರೆ.
|