ಮುಖ್ಯ ಪುಟ  ಸುದ್ದಿ ಜಗತ್ತು > ಸುದ್ದಿಗಳು > ರಾಜ್ಯ ಸುದ್ದಿ
ಸಲಹೆ/ಪ್ರತಿಕ್ರಿಯೆಮಿತ್ರನಿಗೆ ಕಳುಹಿಸಿಈ ಪುಟ ಮುದ್ರಿಸಿ
 
ಶೀಘ್ರ ಕೆಪಿಸಿಸಿ ಅಧ್ಯಕ್ಷರ ಆಯ್ಕೆ: ಆಸ್ಕರ್  Search similar articles
ಪ್ರದೇಶ ಕಾಂಗ್ರೆಸ್ ಸಮಿತಿ(ಕೆಪಿಸಿಸಿ) ಅಧ್ಯಕ್ಷ ಹುದ್ದೆಯನ್ನು ಶೀಘ್ರವೇ ಭರ್ತಿ ಮಾಡಲಾಗುವುದು ಎಂದು ಕಾಂಗ್ರೆಸ್ ಮುಖಂಡ ಆಸ್ಕರ್ ಫರ್ನಾಂಡೀಸ್ ತಿಳಿಸಿದ್ದಾರೆ.

ಕೆಪಿಸಿಸಿಗೆ ಹಂಗಾಮಿ ಅಧ್ಯಕ್ಷರಾಗಿರುವ ಮಲ್ಲಿಕಾರ್ಜುನ ಖರ್ಗೆ ಅವರ ಸ್ಥಾನಕ್ಕೆ ಶೀಘ್ರವೇ ಸೂಕ್ತ ವ್ಯಕ್ತಿಯನ್ನು ನೇಮಕಗೊಳಿಸಲಾಗುವುದು. ಆ ಬಳಿಕವಷ್ಟೇ ಉಳಿದ ವಿಚಾರಗಳ ಕುರಿತು ಚಿಂತನೆ ನಡೆಸುವುದು ಎಂದು ಅವರು ನಗರದಲ್ಲಿ ಶುಕ್ರವಾರ ಸುದ್ದಿಗಾರರೊಂದಿಗೆ ಮಾತನಾಡುತ್ತಾ ತಿಳಿಸಿದರು.

ಪಕ್ಷದ ಬಗ್ಗೆ ಅಸಮಾಧಾನಗೊಂಡಿರುವವರ ಜೊತೆಯಲ್ಲಿ ಮಾತುಕತೆ ಮೂಲಕ ಸಮಸ್ಯೆಗಳನ್ನು ಬಗೆಹರಿಸಲಾಗುವುದು ಎಂದು ತಿಳಿಸಿದ ಅವರು, ಸಿದ್ದರಾಮಯ್ಯನವರು ಪಕ್ಷ ಬಿಟ್ಟು ತೆರಳುವುದಿಲ್ಲ. ಅವರಿಗೆ ಪಕ್ಷದಲ್ಲಿ ಸೂಕ್ತ ಸ್ಥಾನಮಾನ ನೀಡುವ ಕುರಿತು ಈಗಾಗಲೇ ಚಿಂತನೆ ನಡೆಸಲಾಗಿದೆ ಎಂದು ಪ್ರಶ್ನೆಯೊಂದಕ್ಕೆ ಉತ್ತರ ನೀಡಿದರು.

ಮುಂದಿನ ಲೋಕಸಭಾ ಚುನಾವಣೆಯಲ್ಲಿ ಜೆಡಿಎಸ್ ಜೊತೆ ಹೊಂದಾಣಿಕೆ ಮಾಡಬೇಕೆ ಅಥವಾ ಬೇಡವೇ ಎಂಬ ಬಗ್ಗೆ ಹೈಕಮಾಂಡ್ ಮಟ್ಟದಲ್ಲಿ ಚರ್ಚೆ ನಡೆಸಿದ ಬಳಿಕವಷ್ಟೇ ಅಂತಿಮ ತೀರ್ಮಾನಕ್ಕೆ ಪಕ್ಷ ಬರಲಿದೆ ಎಂದು ಅವರು ಇದೇ ಸಂದರ್ಭದಲ್ಲಿ ತಿಳಿಸಿದರು.
ಮತ್ತಷ್ಟು
ಬೆಂಗಳೂರಿಗೆ ವ್ಯಾಪಿಸಿದ ಚಿಕೂನ‌್‌ಗುನ್ಯಾ
ಡೆಂಗ್ಯೂ ಜ್ವರಕ್ಕೆ ಬಾಲೆ ಮೊನಿಷಾ ಬಲಿ
ಮಹಾಚುನಾವಣೆಗೆ ಬಿಜೆಪಿ ಸಜ್ಜು: ವೆಂಕಯ್ಯ ನಾಯ್ಡು
ರಸಗೊಬ್ಬರದ ಅಭಾವವಿಲ್ಲ: ದೇವೇಗೌಡ
ಕಾಂಗ್ರೆಸ್-ಜೆಡಿಎಸ್ ಒಡೆಯಲು ಸಿದ್ದ:ಈಶ್ವರಪ್ಪ
ಪ್ರವಾಸೋದ್ಯಮ ಅಭಿವೃದ್ದಿಗಾಗಿ ಕ್ರಮ:ಜನಾರ್ದನ ರೆಡ್ಡಿ