ಮುಖ್ಯ ಪುಟ  ಸುದ್ದಿ ಜಗತ್ತು > ಸುದ್ದಿಗಳು > ರಾಜ್ಯ ಸುದ್ದಿ
ಸಲಹೆ/ಪ್ರತಿಕ್ರಿಯೆಮಿತ್ರನಿಗೆ ಕಳುಹಿಸಿಈ ಪುಟ ಮುದ್ರಿಸಿ
 
ಸು.ಕೋರ್ಟ್ ನ್ಯಾ.ಮೂ.ಯಾಗಿ ಜೋಸೆಫ್ ನೇಮಕ  Search similar articles
ರಾಜ್ಯ ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿ ಸಿರಿಯಾಕ್ ಜೋಸೆಫ್ ಅವರು ಸುಪ್ರಿಂಕೋರ್ಟ್ ನ್ಯಾಯಮೂರ್ತಿಯಾಗಿ ನೇಮಕಗೊಂಡಿದ್ದಾರೆ.

ಈ ಬಗ್ಗೆ ರಾಷ್ಟ್ರಪತಿಗಳು ಅಂಕಿತ ಹಾಕಿದ್ದು, ಕೇಂದ್ರ ಕಾನೂನು ಮತ್ತು ನ್ಯಾಯಾಂಗ ಸಚಿವಾಲಯ ಆದೇಶ ಹೊರಡಿಸಿದೆ. ಅದರಂತೆ ಮುಖ್ಯ ನ್ಯಾಯಮೂರ್ತಿಗಳಾಗಿ ಸಿರಿಯಾಕ್ ಜೋಸೆಫ್ ಆಯ್ಕೆಗೊಂಡಿದ್ದು, ಯಾವ ಸಂದರ್ಭದಲ್ಲೂ ಅಧಿಕಾರ ಸ್ವೀಕರಿಸಬಹುದಾಗಿದೆ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.

ಈ ಹಿನ್ನೆಲೆಯಲ್ಲಿ ಮುಂದಿನ ತಿಂಗಳು ಏಳರಂದು ಸುಪ್ರಿಂಕೋರ್ಟ್ ನ್ಯಾಯಮೂರ್ತಿಯಾಗಿ ಜೋಸೆಫ್ ಪ್ರಮಾಣ ವಚನ ಸ್ವೀಕರಿಸಿದ್ದಾರೆ. ಅಲ್ಲಿಯವರೆಗೆ ಹಿರಿಯ ನ್ಯಾಯಮೂರ್ತಿ ಆಗಿರುವ ದೀಪಕ್ ವರ್ಮ ಹಂಗಾಮಿ ಮುಖ್ಯ ನ್ಯಾಯಮೂರ್ತಿಗಳಾಗಿ ಕಾರ್ಯ ನಿರ್ವಹಿಸಲಿದ್ದಾರೆ.

ಈ ಮಧ್ಯೆ ಧಾರವಾಡ ಹಾಗೂ ಗುಲ್ಬರ್ಗ ಹೈಕೋರ್ಟ್ ಸಂಚಾರಿ ನ್ಯಾಯಪೀಠಗಳಲ್ಲಿ ಕಾರ್ಯನಿರ್ವಹಿಸುವ ನ್ಯಾಯಮೂರ್ತಿಗಳ ಪಟ್ಟಿಯನ್ನು ಹೈಕೋರ್ಟ್ ರಿಜಿಸ್ಟ್ರಾರ್ ಎ.ಪಿ. ಮುರಾರಿ ಬಿಡುಗಡೆ ಮಾಡಿದ್ದಾರೆ.
ಮತ್ತಷ್ಟು
ಸರ್ಕಾರ ಬಹುದಿನ ಉಳಿಯುವುದಿಲ್ಲ: ಖರ್ಗೆ
ಲೋಕಾಯುಕ್ತರ ಬಲೆಗೆ ಬಿದ್ದ ಭಾರೀ ಮಿಕಗಳು
ಶೀಘ್ರ ಕೆಪಿಸಿಸಿ ಅಧ್ಯಕ್ಷರ ಆಯ್ಕೆ: ಆಸ್ಕರ್
ಬೆಂಗಳೂರಿಗೆ ವ್ಯಾಪಿಸಿದ ಚಿಕೂನ‌್‌ಗುನ್ಯಾ
ಡೆಂಗ್ಯೂ ಜ್ವರಕ್ಕೆ ಬಾಲೆ ಮೊನಿಷಾ ಬಲಿ
ಮಹಾಚುನಾವಣೆಗೆ ಬಿಜೆಪಿ ಸಜ್ಜು: ವೆಂಕಯ್ಯ ನಾಯ್ಡು