ಮುಖ್ಯ ಪುಟ  ಸುದ್ದಿ ಜಗತ್ತು > ಸುದ್ದಿಗಳು > ರಾಜ್ಯ ಸುದ್ದಿ
ಸಲಹೆ/ಪ್ರತಿಕ್ರಿಯೆಮಿತ್ರನಿಗೆ ಕಳುಹಿಸಿಈ ಪುಟ ಮುದ್ರಿಸಿ
 
ಭಯೋತ್ಪಾದಕ ಚಟುವಟಿಕೆ ನಡೆಯುತ್ತಿಲ್ಲ: ಅಲಿಖಾನ್  Search similar articles
ರಾಜ್ಯದ ಮದ್ರಸಾಗಳಲ್ಲಿ ಭಯೋತ್ಪಾದಕ ಚಟುವಟಿಕೆಗಳು ನಡೆಯುತ್ತಿಲ್ಲ ಎಂದು ವಕ್ಫ್ ಮತ್ತು ಅಲ್ಪಸಂಖ್ಯಾತರ ಖಾತೆ ಸಚಿವ ಪ್ರೊ. ಮುಮ್ತಾಜ್ ಅಲಿಖಾನ್ ಸ್ಪಷ್ಟಪಡಿಸಿದ್ದಾರೆ.

ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪಾಕಿಸ್ತಾನದ ಮದ್ರಸಾಗಳಲ್ಲಿ ಉಗ್ರರಿಗೆ ತರಬೇತಿ ನೀಡುತ್ತಿರಬಹುದು. ಆದರೆ ಕರ್ನಾಟಕ ಮದ್ರಾಸಗಳಲ್ಲಿ ಅಂತಹ ಸ್ಥಿತಿ ನಿರ್ಮಾಣವಾಗಿಲ್ಲ ಎಂದು ತಿಳಿಸಿದರು.

ರಾಜ್ಯದ ಮದ್ರಸಾಗಳು ಎಲ್ಲಕ್ಕಿಂತ ಭಿನ್ನವಾಗಿದೆ. ಇಲ್ಲಿ ಖುರಾನ್ ಜೊತೆಗೆ ಮಕ್ಕಳ ಭವಿಷ್ಯದ ದೃಷ್ಟಿಯಿಂದ ಶಾಲಾ ಪಾಠಗಳನ್ನು ಕಲಿಸಲಾಗುತ್ತಿದೆ. ಅಲ್ಲದೆ, ಶಿಕ್ಷಣದ ಗುಣಮಟ್ಟದಲ್ಲಿ ಬದಲಾವಣೆ ತರಲಾಗಿದೆ ಎಂದು ಅವರು ತಿಳಿಸಿದರು.

ಈ ಬಾರಿಯ ಹಜ್ ಯಾತ್ರೆಗೆ ರಾಜ್ಯದಿಂದ ತೆರಳುವ ಆರು ಸಾವಿರ ಮಂದಿಗೆ ಆರ್ಥಿಕ ನೆರವು ನೀಡಲು ನಿರ್ಧರಿಸಲಾಗಿದೆ. ಹಜ್ ಸಂಸ್ಥೆಯಲ್ಲಿ ಅವ್ಯವಹಾರ ನಡೆದಿದೆ ಎಂಬ ಬಗ್ಗೆ ಮಾಹಿತಿ ದೊರೆತಿದ್ದು, ಈ ಬಗ್ಗೆ ಸಮಗ್ರ ತನಿಖೆ ನಡೆಸಿ ಕಾನೂನು ರೀತಿಯ ಕ್ರಮ ಜರುಗಿಸಲಾಗುವುದು ಎಂದು ಅವರು ಇದೇ ಸಂದರ್ಭದಲ್ಲಿ ತಿಳಿಸಿದರು.
ಮತ್ತಷ್ಟು
ಸು.ಕೋರ್ಟ್ ನ್ಯಾ.ಮೂ.ಯಾಗಿ ಜೋಸೆಫ್ ನೇಮಕ
ಸರ್ಕಾರ ಬಹುದಿನ ಉಳಿಯುವುದಿಲ್ಲ: ಖರ್ಗೆ
ಲೋಕಾಯುಕ್ತರ ಬಲೆಗೆ ಬಿದ್ದ ಭಾರೀ ಮಿಕಗಳು
ಶೀಘ್ರ ಕೆಪಿಸಿಸಿ ಅಧ್ಯಕ್ಷರ ಆಯ್ಕೆ: ಆಸ್ಕರ್
ಬೆಂಗಳೂರಿಗೆ ವ್ಯಾಪಿಸಿದ ಚಿಕೂನ‌್‌ಗುನ್ಯಾ
ಡೆಂಗ್ಯೂ ಜ್ವರಕ್ಕೆ ಬಾಲೆ ಮೊನಿಷಾ ಬಲಿ