ಮುಖ್ಯ ಪುಟ  ಸುದ್ದಿ ಜಗತ್ತು > ಸುದ್ದಿಗಳು > ರಾಜ್ಯ ಸುದ್ದಿ
ಸಲಹೆ/ಪ್ರತಿಕ್ರಿಯೆಮಿತ್ರನಿಗೆ ಕಳುಹಿಸಿಈ ಪುಟ ಮುದ್ರಿಸಿ
 
ಎರಡು ಕ್ಷೇತ್ರಗಳಲ್ಲಿ ಬಿಜೆಪಿ ಜಯಭೇರಿ  Search similar articles
NRB
ವಿಧಾನಪರಿಷತ್ ಚುನಾವಣೆಯ ಮತ ಎಣಿಕೆ ಕಾರ್ಯ ಆರಂಭಗೊಂಡಿದ್ದು, ಎರಡು ಕ್ಷೇತ್ರದ ಫಲಿತಾಂಶ ಹೊರಬಿದ್ದಿದೆ.

ಈಶಾನ್ಯ ಪದವೀಧರ ಕ್ಷೇತ್ರದಲ್ಲಿ ಬಿಜೆಪಿ ಶಶಿಲ್ ನಮೋಶಿ ಜಯಗಳಿಸಿದ್ದು, 10,542 ಮತಗಳನ್ನು ಪಡೆದುಕೊಂಡಿದ್ದಾರೆ. ಈ ಕ್ಷೇತ್ರಕ್ಕೆ ನಡೆದ ಚುನಾವಣೆಯಲ್ಲಿ ಒಟ್ಟು 12,762 ಮತಗಳು ಚಲಾವಣೆಯಾಗಿದ್ದವು. ಈ ಕ್ಷೇತ್ರದಿಂದ ಒಟ್ಟು ಆರು ಅಭ್ಯರ್ಥಿಗಳು ಕಣದಲ್ಲಿದ್ದರು. ವಿಧಾನಪರಿಷತ್‌ನಲ್ಲಿ ಸತತ ಎರಡು ಗೆಲುವು ಸಾಧಿಸಿದ್ದ ನಮೋಶಿ ಮತ್ತೊಮ್ಮೆ ಗೆಲುವು ಸಾಧಿಸಿದ್ದಾರೆ.

ಅಂತೆಯೇ ಅವಿಭಜಿತ ದಕ್ಷಿಣ ಕನ್ನಡ ಕ್ಷೇತ್ರದಿಂದ ಬಿಜೆಪಿಯ ಕೋಟಾ ಶ್ರೀನಿವಾಸ್ ಜಯಗಳಿಸಿದ್ದು, 293 ಅಂತರದಿಂದ ಗೆಲುವು ಸಾಧಿಸಿದ್ದಾರೆ.

ಈ ಮಧ್ಯೆ ಎಚ್.ಕೆ. ಪಾಟೀಲ್‌ ಅವರ ಪ್ರತಿಷ್ಠೆಯ ಕಣವಾಗಿರುವ ಪಶ್ಚಿಮ ಪದವೀಧರ ಕ್ಷೇತ್ರದ ಪ್ರಥಮ ಸುತ್ತಿನ ಮತ ಎಣಿಕೆ ಕಾರ್ಯ ಮುಗಿದಿದ್ದು, ಪಾಟೀಲ್ 900ಮತಗಳಿಂದ ಹಿನ್ನಡೆ ಅನುಭವಿಸಿದ್ದಾರೆ. ಬೆಂಗಳೂರು ಶಿಕ್ಷಕರ ಕ್ಷೇತ್ರದಲ್ಲಿ ಜೆಡಿಎಸ್‌ನ ಪುಟ್ಟಣ್ಣ ಮುನ್ನಡೆ ಸಾಧಿಸಿದ್ದಾರೆ. ಬೆಂಗಳೂರು ಪದವೀಧರ ಕ್ಷೇತ್ರದ ಚುನಾವಣೆಯ ಮತ ಎಣಿಕೆ ಕಾರ್ಯ ನಗರದ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯದಲ್ಲಿ ನಡೆಸಲಾಗುತ್ತಿದೆ.
ಮತ್ತಷ್ಟು
ಭಯೋತ್ಪಾದಕ ಚಟುವಟಿಕೆ ನಡೆಯುತ್ತಿಲ್ಲ: ಅಲಿಖಾನ್
ಸು.ಕೋರ್ಟ್ ನ್ಯಾ.ಮೂ.ಯಾಗಿ ಜೋಸೆಫ್ ನೇಮಕ
ಸರ್ಕಾರ ಬಹುದಿನ ಉಳಿಯುವುದಿಲ್ಲ: ಖರ್ಗೆ
ಲೋಕಾಯುಕ್ತರ ಬಲೆಗೆ ಬಿದ್ದ ಭಾರೀ ಮಿಕಗಳು
ಶೀಘ್ರ ಕೆಪಿಸಿಸಿ ಅಧ್ಯಕ್ಷರ ಆಯ್ಕೆ: ಆಸ್ಕರ್
ಬೆಂಗಳೂರಿಗೆ ವ್ಯಾಪಿಸಿದ ಚಿಕೂನ‌್‌ಗುನ್ಯಾ