ಮುಖ್ಯ ಪುಟ  ಸುದ್ದಿ ಜಗತ್ತು > ಸುದ್ದಿಗಳು > ರಾಜ್ಯ ಸುದ್ದಿ
ಸಲಹೆ/ಪ್ರತಿಕ್ರಿಯೆಮಿತ್ರನಿಗೆ ಕಳುಹಿಸಿಈ ಪುಟ ಮುದ್ರಿಸಿ
 
ಜುಲೈ 2ರಂದು ದೆಹಲಿಗೆ ಸರ್ವಪಕ್ಷ ನಿಯೋಗ  Search similar articles
ರಸಗೊಬ್ಬರವನ್ನು ಸಮರ್ಪಕವಾಗಿ ಪೂರೈಸುವ ನಿಟ್ಟಿನಲ್ಲಿ ಮುಂದಿನ ತಿಂಗಳ ಎರಡರಂದು ದೆಹಲಿಗೆ ಸರ್ವಪಕ್ಷ ನಿಯೋಗವೊಂದು ತೆರಳಲಿದೆ ಎಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ತಿಳಿಸಿದ್ದಾರೆ.

ನಗರದಲ್ಲಿ ಭಾನುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದ ಮುಖ್ಯಕಾರ್ಯದರ್ಶಿ ನೇತೃತ್ವದಲ್ಲಿ ದೆಹಲಿಗೆ ತೆರಳಲಿದ್ದು, ಪ್ರಧಾನಿ ಹಾಗೂ ರಸಗೊಬ್ಬರ ಸಚಿವರನ್ನು ನಿಯೋಗ ಭೇಟಿ ಮಾಡಲಿದೆ ಎಂದು ಅವರು ತಿಳಿಸಿದರು.

ಈ ಸಂದರ್ಭದಲ್ಲಿ ರಾಜ್ಯಕ್ಕೆ ಅಗತ್ಯವಿರುವ ರಸಗೊಬ್ಬರವನ್ನು ಪೂರೈಸುವಂತೆ ಮನವಿ ಮಾಡಲಾಗುವುದು. ಅಲ್ಲದೆ, ಗ್ರಾಮಾಭಿವೃದ್ದಿ ಯೋಜನೆಗೆ 1750ಕೋಟಿ ರೂ. ಬಿಡುಗಡೆ ಮಾಡುವಂತೆ ಮನವಿ ಸಲ್ಲಿಸಲಾಗುವುದು ಎಂದು ಅವರು ತಿಳಿಸಿದರು.

ರಾಜ್ಯದಲ್ಲಿ ಬಿಜೆಪಿ ಆಡಳಿತಕ್ಕೆ ಬಂದ ದಿನದಿಂದ ರಸಗೊಬ್ಬರ ಸಮಸ್ಯೆ ಎದುರಾಗಿದ್ದು, ಇದರಿಂದ ಸಾವಿರಾರು ರೈತರು ಪ್ರತಿಭಟನೆಗಿಳಿದಿದ್ದರು. ಅಲ್ಲದೆ, ಅಧಿವೇಶನದಲ್ಲೂ ರಸಗೊಬ್ಬರದ ಕುರಿತು ಗದ್ದಲ ನಡೆದಿತ್ತು. ಈ ಸಂದರ್ಭದಲ್ಲಿ ಯಡಿಯೂರಪ್ಪನವರು ಸಮಸ್ಯೆ ಬಗೆಹರಿಸುವುದಕ್ಕಾಗಿ ದೆಹಲಿಗೆ ನಿಯೋಗವೊಂದನ್ನು ಶೀಘ್ರವೇ ಕಳುಹಿಸಲಾಗುವುದು ಎಂದು ಪ್ರತಿಪಕ್ಷಗಳಿಗೆ ಭರವಸೆ ನೀಡಿದ್ದರು.
ಮತ್ತಷ್ಟು
ಚಿಕುನ್‌ಗುನ್ಯಾ: ಕರಾವಳಿಯಲ್ಲಿ ಮತ್ತಿಬ್ಬರು ಬಲಿ
ಜಯಮಾಲಾಗೆ ಒಲಿದ ಅಧ್ಯಕ್ಷ ಸ್ಥಾನ
ದೇಶವ್ಯಾಪಿ ಲಾರಿ ಮುಷ್ಕರ ಹಿಂದಕ್ಕೆ
ಚುನಾವಣಾ ಫಲಿತಾಂಶ ಲೋಕಸಭೆಗೆ ದಿಕ್ಸೂಚಿ
ಸೋಲಿಲ್ಲದ ಸರದಾರಗೆ ಸೋಲುಣಿಸಿದ ಲಿಂಬೀಕಾಯಿ
ಇಲ್ಲೂ ಸಲ್ಲದ ಎಚ್.ಕೆ.ಪಾಟೀಲ್‌ಗೆ ಸೋಲು