ಪದ್ಮಪ್ರಿಯಾ ಸಾವಿನ ಪ್ರಕರಣಕ್ಕೆ ಸ್ನೇಹಿತ, ಇಂಜಿನಿಯರ್ ಅತುಲ್ ರಾವ್ ನೇರ ಹೊಣೆ ಎಂದು ಉಡುಪಿ ಶಾಸಕ ರಘುಪತಿ ಭಟ್ ಆರೋಪಿಸಿದ್ದಾರೆ.
ಭಾನುವಾರ ನಗರದಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಈ ಪ್ರಕರಣವನ್ನು ಕೈಗೆತ್ತಿಕೊಂಡಿರುವ ರಾಜ್ಯ ಪೊಲೀಸ್ ಇಲಾಖೆ ಬಗ್ಗೆ ತಮಗೆ ವಿಶ್ವಾಸವಿದೆ. ಶೀಘ್ರವೇ ಅತುಲ್ ರಾವ್ ಹಾಗೂ ಪ್ರಕರಣಕ್ಕೆ ಸಂಬಂಧಪಟ್ಟ ಆರೋಪಿಗಳನ್ನು ಶೀಘ್ರವೇ ಬಂಧಿಸಬೇಕೆಂದು ಆಗ್ರಹಿಸಿದರು.
ತಮ್ಮ ಪತ್ನಿ ಪದ್ಮಪ್ರಿಯಾ ಹೆಸರಿನಲ್ಲಿ ಟ್ರಸ್ಟ್ ಒಂದನ್ನು ಶೀಘ್ರದಲ್ಲಿಯೇ ಸ್ಥಾಪನೆ ಮಾಡಲಾಗುವುದು ಎಂದು ಅವರು ಇದೇ ಸಂದರ್ಭದಲ್ಲಿ ತಿಳಿಸಿದರು.
ಈ ಮಧ್ಯೆ ತನಿಖೆಯ ಕುರಿತು ಮಾಹಿತಿ ನೀಡಿದ ಗೃಹ ಸಚಿವ ವಿ.ಎಸ್. ಆಚಾರ್ಯ ಸಾವಿನ ಹಿಂದೆ ಯಾವುದೇ ಷಡ್ಯಂತ್ರಗಳಿದ್ದರೂ ಬಯಲಿಗೆಳೆಯಲು ಸಿದ್ದವಾಗಿರುವುದಾಗಿ ತಿಳಿಸಿದ್ದಾರೆ.
|