ಬಹುಕಾಲದಿಂದ ಗಣಿಗಾರಿಕೆ ನಡೆಸುತ್ತಿದ್ದ ಕುದುರೆಮುಖ ಗಣಿಗಾರಿಕೆಯನ್ನು ಅಂತ್ಯಗೊಳಿಸಲು ರಾಜ್ಯ ಸರ್ಕಾರ ನಿರ್ಧರಿಸಿದೆ. ಈ ಮೂಲಕ ನಕ್ಸಲ್ ನಿಗ್ರಹಕ್ಕೆ ಸರ್ಕಾರ ಹೊಸ ತಂತ್ರವನ್ನು ಹೆಣೆದಿದೆ.
ಈ ಬಗ್ಗೆ ನಗರದಲ್ಲಿ ಭಾನುವಾರ ಸ್ಪಷ್ಟೀಕರಣ ನೀಡಿರುವ ಗೃಹ ಸಚಿವ ಡಾ.ವಿ.ಎಸ್. ಆಚಾರ್ಯ, ಕುದುರೆಮುಖ ಗಣಿಗಾರಿಕೆಯನ್ನು ಅಂತ್ಯಗೊಳಿಸಿ, ಆ ಸ್ಥಳದಲ್ಲಿ ಪೊಲೀಸ್ ತರಬೇತಿ ಕೇಂದ್ರ ಸ್ಥಾಪನೆ ಮಾಡಲಾಗುವುದು. ಈ ಮೂಲಕ ನಕ್ಸಲರ ನಿಗ್ರಹಕ್ಕೆ ಇದು ಸಹಾಯವಾಗಲಿದೆ ಎಂದು ತಿಳಿಸಿದ್ದಾರೆ.
ನಕ್ಸಲರ ಜೊತೆ ಶಾಂತಿ ಮಾತುಕತೆ ನಡೆಸುವ ಅಗತ್ಯ ಸರ್ಕಾರಕ್ಕಿಲ್ಲ ಎಂದು ತಿಳಿಸಿದ ಅವರು, ನಕ್ಸಲ ಪೀಡಿತ ಪ್ರದೇಶಗಳಲ್ಲಿ ಹೆಚ್ಚಿನ ಭದ್ರತೆಯನ್ನು ಒದಗಿಸಲಾಗುವುದು ಎಂದು ತಿಳಿಸಿದ್ದಾರೆ.
ಅಲ್ಲದೆ, ನಕ್ಸಲ್ ಪೀಡಿತ ಪ್ರದೇಶಗಳ ಅಭಿವೃದ್ದಿಗೆ ಆದ್ಯತೆ ನೀಡಲಾಗುವುದು ಎಂದು ತಿಳಿಸಿದ ಅವರು, ಸಮಸ್ಯೆ ಪರಿಹಾರಕ್ಕೆ ಅಧಿಕಾರಿಗಳೊಂದಿಗೆ ಶೀಘ್ರವೇ ಚರ್ಚೆ ನಡೆಸುವುದಾಗಿ ತಿಳಿಸಿದರು.
|