ರಾಜ್ಯದಲ್ಲಿ ಬಿಜೆಪಿ ನೇತೃತ್ವದ ಸರಕಾರವನ್ನು ಒಡೆಯುವ ಉದ್ದೇಶ ಕಾಂಗ್ರೆಸ್ ಪಕ್ಷಕ್ಕಿಲ್ಲ ಎಂದು ಮಾಜಿ ಉಪಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಪಷ್ಟಪಡಿಸಿದ್ದಾರೆ.
ನಗರದಲ್ಲಿ ನಡೆದ ಖಾಸಗಿ ಕಾರ್ಯಕ್ರಮವೊಂದರಲ್ಲಿ ಮಾತನಾಡಿದ ಅವರು, ಯಡಿಯೂರಪ್ಪನವರು ಐದು ವರ್ಷಗಳ ಕಾಲ ಆಡಳಿತ ನಡೆಸುವುದಕ್ಕೆ ತಮ್ಮ ಅಭ್ಯಂತರವಿಲ್ಲ. ಆದರೆ ಪಕ್ಷೇತರರು ಬಿಜೆಪಿ ಕೈ ಬಿಟ್ಟರೆ ಏನೂ ಮಾಡಲು ಸಾಧ್ಯವಿಲ್ಲ ಎಂದು ತಿಳಿಸಿದರು.
ಮೈಸೂರು ಪ್ರವಾಸೋದ್ಯಮ ಕೇಂದ್ರವಾಗಬೇಕು ಎಂಬ ಉದ್ದೇಶದಿಂದ ತಾನು ಜಿಲ್ಲಾ ಉಸ್ತುವಾರಿ ಸಚಿವರಿದ್ದಾಗಲೇ ನೀಲಿನಕ್ಷೆ ತಯಾರಿಸಿದ್ದೆ. ಆದರೆ ತಾನು ಮಂತ್ರಿ ಪದವಿ ಕಳೆದುಕೊಂಡಿದ್ದರಿಂದ ಯೋಜನೆ ನೆನಗುದಿಗೆ ಬಿದ್ದಿತು ಎಂದು ಅವರು ತಿಳಿಸಿದರು.
ಮೈಸೂರು ಜಿಲ್ಲೆಯನ್ನು ಅತ್ಯುತ್ತಮ ಪ್ರವಾಸೋದ್ಯಮ ಕೇಂದ್ರವನ್ನಾಗಿ ಮಾಡಬೇಕು ಎಂದು ಸರ್ಕಾರವನ್ನು ಮನವಿ ಮಾಡಿದ ಅವರು, ವಿಮಾನ ನಿಲ್ದಾಣ ನಿರ್ಮಾಣದಿಂದ ಮುಂದಿನ ಎರಡು ಮೂರು ವರ್ಷಗಳಲ್ಲಿ ಉತ್ತಮ ಪ್ರವಾಸಿ ಕೇಂದ್ರವಾಗಿ ರೂಪುಗೊಳ್ಳಲಿದೆ ಎಂಬ ನಿರೀಕ್ಷೆ ವ್ಯಕ್ತಪಡಿಸಿದರು.
|