ಇತ್ತೀಚೆಗಷ್ಟೇ ವಿವಾದಾತ್ಮಕ ಹೇಳಿಕೆ ನೀಡುವ ಮೂಲಕ ಸುದ್ದಿಯಲ್ಲಿದ್ದ ಇಂಧನ ಸಚಿವ ಕೆ.ಎಸ್. ಈಶ್ವರಪ್ಪ ಮತ್ತೆ ಅದೇ ಮಾತನ್ನು ಪುನರುಚ್ಚರಿಸಿದ್ದಾರೆ.
ರಾಜ್ಯದಲ್ಲಿ ಅಧಿಕಾರದಲ್ಲಿರುವ ಬಿಜೆಪಿ ನೇತೃತ್ವದ ಸರಕಾರವನ್ನು ಉರುಳಿಸಲು ಯಾರಾದರೂ ಮುಂದಾದಲ್ಲಿ ಕೈಕಟ್ಟಿ ಸುಮ್ಮನೆ ಕೂರುವುದಿಲ್ಲ ಎಂದು ಬುಧವಾರ ಸುದ್ದಿಗಾರರೊಂದಿಗೆ ಮಾತನಾಡುತ್ತಾ ತಿಳಿಸಿದ್ದಾರೆ.
ಸರಕಾರವನ್ನು ಉರುಳಿಸಲು ಮುಂದಾಗುವ ಪಕ್ಷವನ್ನು ಒಡೆದಾದರೂ ಸರಕಾರದ ಸ್ಥಿರತೆ ಕಾಯ್ದುಕೊಳ್ಳಲಾಗುತ್ತದೆ ಎಂದು ಅವರು ಹೇಳಿದರು.
ರಸಗೊಬ್ಬರ ಅಭಾವ ಸೇರಿದಂತೆ ರೈತರ ಹಲವು ಸಮಸ್ಯೆಗಳ ಪರಿಹಾರಕ್ಕಾಗಿ ಮಂಗಳವಾರ ಬೆಂಗಳೂರಿನಲ್ಲಿ ಮುಖ್ಯಮಂತ್ರಿಗಳು ಹಾಗೂ ರೈತ ಮುಖಂಡರ ಸಭೆಯನ್ನು ಆಯೋಜಿಸಲಾಗಿದೆ ಎಂದು ತಿಳಿಸಿದರು.
ಈ ಮೊದಲು ಈಶ್ವರಪ್ಪ ನೀಡಿದ್ದ ಹೇಳಿಕೆಯನ್ನು ತಳ್ಳಿ ಹಾಕಿದ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಇದೊಂದು ವೈಯಕ್ತಿಕ ಹೇಳಿಕೆ ಎಂದು ತಿಳಿಸಿದ್ದರು. ಆದರೆ ಈಗ ಮತ್ತೆ ಈಶ್ವರಪ್ಪ ಅದೇ ಹೇಳಿಕೆಯನ್ನು ಪುನರುಚ್ಚರಿಸಿರುವುದು ಮತ್ತೊಂದು ವಿವಾದವಾಗುವ ಲಕ್ಷಣಗಳಿವೆ
|