ಮುಖ್ಯ ಪುಟ  ಸುದ್ದಿ ಜಗತ್ತು > ಸುದ್ದಿಗಳು > ರಾಜ್ಯ ಸುದ್ದಿ
ಸಲಹೆ/ಪ್ರತಿಕ್ರಿಯೆಮಿತ್ರನಿಗೆ ಕಳುಹಿಸಿಈ ಪುಟ ಮುದ್ರಿಸಿ
 
ಒತ್ತುವರಿ ವಿರುದ್ಧ ನಿರ್ದಾಕ್ಷಿಣ್ಯ ಕ್ರಮ: ರೆಡ್ಡಿ  Search similar articles
NRB
ಬೆಂಗಳೂರು ಸೇರಿದಂತೆ ರಾಜ್ಯದೆಲ್ಲೆಡೆ ಸರಕಾರಿ ಭೂಮಿಯನ್ನು ಒತ್ತುವರಿ ಮಾಡಿಕೊಂಡಿರುವವರ ವಿರುದ್ಧ ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳುವುದಾಗಿ ಕಂದಾಯ ಸಚಿವ ಕರುಣಾಕರ ರೆಡ್ಡಿ ಸ್ಪಷ್ಟಪಡಿಸಿದ್ದಾರೆ.

ನಗರದಲ್ಲಿ ಸೋಮವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಒತ್ತುವರಿ ಮಾಡಿಕೊಂಡವರು ಎಷ್ಟೇ ಶ್ರೀಮಂತರಿರಲಿ ಅಥವಾ ರಾಜಕಾರಣಿಗಳಿರಲಿ ಅಂಥವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲು ಹಿಂಜರಿಯುವುದಿಲ್ಲ ಎಂದು ತಿಳಿಸಿದ್ದಾರೆ.

ಈ ಬಗ್ಗೆ ಎ.ಟಿ. ರಾಮಸ್ವಾಮಿ ನೇತೃತ್ವದ ಸಮಿತಿ ಅಧ್ಯಯನ ನಡೆಸಿ ವರದಿ ನೀಡಿದೆ. ಅದನ್ನು ಪರೀಶೀಲಿಸಿ ಸೂಕ್ರ ಕ್ರಮ ಜಾರಿಗೊಳಿಸಲಾಗುವುದು. ಅಲ್ಲದೆ, ಗ್ರಾಮ ಪಂಚಾಯಿತಿಗಳ ಮಟ್ಟದಲ್ಲಿ ಸರಕಾರಿ ಭೂಮಿ ಒತ್ತುವರಿಯಾಗಿರುವ ಬಗ್ಗೆ ಸಮಗ್ರ ವರದಿ ನೀಡುವಂತೆ ಜಿಲ್ಲಾಧಿಕಾರಿಗಳಿಗೆ ಈಗಾಗಲೇ ಸೂಚನೆ ನೀಡಲಾಗಿದ್ದು, ವರದಿ ಬಂದ ಬಳಿಕ ಮುಂದಿನ ಕ್ರಮ ಕೈಗೊಳ್ಳಲಾಗುವುದು ಎಂದು ಅವರು ತಿಳಿಸಿದರು.

ರೈತರ ಅನುಕೂಲಕ್ಕಾಗಿ ಮಳೆ ಮಾಪನ ಕೇಂದ್ರಗಳನ್ನು ತೆರೆಯಲು ಉದ್ದೇಶಿಸಲಾಗಿದ್ದು, ಇದರಿಂದ ಬೆಳೆ ನಷ್ಟವಾದಾಗ ರೈತರಿಗೆ ಪರಿಹಾರ ಧನ ಘೋಷಿಸಲು ಸಹಾಯವಾಗುತ್ತದೆ ಎಂದು ಅವರು ಇದೇ ಸಂದರ್ಭದಲ್ಲಿ ಪ್ರಕಟಿಸಿದರು.
ಮತ್ತಷ್ಟು
ವೇಗ ನಿಯಂತ್ರಕ ಕಡ್ಡಾಯಕ್ಕೆ ಹೈ.ಕೋ. ಆದೇಶ
ಮತ್ತೊಮ್ಮೆ ಪಕ್ಷ ಒಡೆಯುವ ಮಾತನ್ನಾಡಿದ ಈಶ್ವರಪ್ಪ
ವಿಧಾನಪರಿಷತ್ ಹಂಗಾಮಿ ಸಭಾಪತಿಯಾಗಿ ತಿಪ್ಪಣ್ಣ
ರೈತರಿಗೆ ಉಚಿತ ವಿದ್ಯುತ್ ಅಸಾಧ್ಯ: ಸಿಎಂ
ಸ್ವಯಂಕೃತ ಅಪರಾಧ: ಸಿಂಧ್ಯಾ ಪಾಪ ನಿವೇದನೆ
ಸರಕಾರ ಒಡೆಯುವ ಉದ್ದೇಶ ಕಾಂಗ್ರೆಸ್ಸಿಗಿಲ್ಲ:ಸಿದ್ದು