ನಗರ ಹಾಗೂ ನಗರ ಜಿಲ್ಲೆಗಳಲ್ಲಿ ಸರಕಾರಿ ಜಾಗವನ್ನು ಅತಿಕ್ರಮಿಸಿಕೊಂಡು ಐಷಾರಾಮಿ ಜೀವನ ನಡೆಸುತ್ತಿರುವವರ ವಿರುದ್ಧ ಕ್ರಮ ಕೈಗೊಳ್ಳಲು ಸರಕಾರ ಹಿಂದೇಟು ಹಾಕುವುದಿಲ್ಲ ಎಂದು ಕಂದಾಯ ಸಚಿವ ಜಿ.ಕರುಣಾಕರ ರೆಡ್ಡಿ ಹೇಳಿದ್ದಾರೆ.
ಹಿಂದಿನ ವಿಧಾನಸಭೆ ಆಸ್ತಿತ್ವದಲ್ಲಿದ್ದಾಗ ಶಾಸಕ.ಜಿ.ಟಿ.ರಾಮಸ್ವಾಮಿ ನೇತೃತ್ವದಲ್ಲಿ ರಚನೆಯಾಗಿದ್ದ ಜಂಟಿ ಸದನ ಸಮಿತಿ ವರದಿಯನ್ನು ಸರಕಾರ ಗಂಭೀರವಾಗಿ ಪರಿಗಣಿಸಿದೆ ಎಂದ ಅವರು, ಜಂಟಿ ಸದನ ಪತ್ತೆ ಹಚ್ಚಿದ ಅತಿಕ್ರಮಿತ ಜಾಗದಲ್ಲಿ 8,718 ಎಕರೆ ಭೂಮಿಯನ್ನು ಈಗಾಗಲೇ ವಶಪಡಿಸಿಕೊಳ್ಳಲಾಗಿದೆ ಎಂದರು. ಜಂಟಿ ಸದನದ ಅಗತ್ಯವಿದ್ದರೆ ಮತ್ತೊಮ್ಮೆ ರಚಿಸಲು ಸರಕಾರ ಸಿದ್ಧವಿದೆ ಎಂದು ತಿಳಿಸಿದರು.
ಜನಸಾಮಾನ್ಯರಿಗೆ ಕಂದಾಯ ಇಲಾಖೆಯ ಕೆಲಸ ಕಾರ್ಯಗಳು ತ್ರಾಸದಾಯಕವಾಗಿರಬಾರದು ಎಂಬ ದೃಷಿಯಿಂದ ಎಲ್ಲ ಅಧಿಕಾರಿಗಳು ಎರಡು ವಾರದೊಳಗಡೆ ಬಾಕಿ ಉಳಿದಿರುವ ಕಡತಗಳನ್ನು ವಿಲೇವಾರಿ ಮಾಡುವಂತೆ ಸೂಚಿಸಲಾಗಿದೆ. ಸುಮಾರು 32 ಬಗೆಯ ದಾಖಲೆಗಳನ್ನು ಒಂದೇ ಕಡೆ ನೀಡುವ 'ನೆಮ್ಮದಿ' ಕೇಂದ್ರವನ್ನು ಗ್ರಾಮ ಪಂಚಾಯಿತಿ ಮಟ್ಟಕ್ಕೆ ವಿಸ್ತರಿಸಲಾಗುವುದು. ಹೋಬಳಿ ಮಾಪನದಲ್ಲಿರುವ ಮಳೆ ಮಾಪನ ಕೇಂದ್ರವನ್ನು ಗ್ರಾಮ ಪಂಚಾಯಿತಿ ಮಟ್ಟದಲ್ಲಿ ಆರಂಭಿಸಲಾಗುವುದು ಎಂದು ಹೇಳಿದರು.
|