ಕರ್ನಾಟಕ ಜನತೆ ನೀಡಿರುವ ಪ್ರೀತಿಯನ್ನು ನಾನೆಂದೂ ಮರೆಯಲಾರೆ. ಇದು ನನ್ನ ಜೀವನದ ಅವಿಸ್ಮರಣೀಯ ಅನುಭವ ಎಂದು ಸುಪ್ರೀಂಕೋರ್ಟ್ ನ್ಯಾಯಮೂರ್ತಿಯಾಗಿ ನೇಮಗೊಂಡಿರುವ ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿ ಸಿರಿಯಾಕ್ ಜೋಸೆಫ್ ಹೇಳಿದರು.
ನ್ಯಾಯಾಂಗ ಅಕಾಡೆಮಿ, ಕಾನೂನು ಸೇವಾ ಪ್ರಾಧಿಕಾರಗಳ ಆಶ್ರಯದಲ್ಲಿ ನಡೆದ ಅಭಿನಂದನಾ ಕಾರ್ಯಕ್ರಮದಲ್ಲಿ ಭಾಗವಹಿಸಿ ಅವರು ಮಾತನಾಡಿದರು. ಇಲ್ಲಿನ ಜನತೆಯ ಸ್ನೇಹ ಹಾಗೂ ಅವರ ಪ್ರೀತಿಗೆ ನಾನು ಚಿರಋಣಿ ಎಂದು ಅವರು ಕೃತಜ್ಞತೆ ಸಲ್ಲಿಸಿದರು.
ರಾಜ್ಯದಲ್ಲಿ ಕಾಯಂ ಹೈಕೋರ್ಟ್ ಪೀಠ ಸ್ಥಾಪನೆಗೆ ಬೇಡಿಕೆ ಇದ್ದ ಸಂದರ್ಭದಲ್ಲಿ ಧಾರವಾಡ ಮತ್ತು ಗುಲ್ಬರ್ಗಾದಲ್ಲಿ ಸಂಚಾರಿ ಪೀಠ ಸ್ಥಾಪಿಸಬೇಕಾಗಿರುವುದು ಅನಿವಾರ್ಯ ನಿರ್ಧಾರವಾಗಿತ್ತು. ಈ ಬಗ್ಗೆ ಸಾಕಷ್ಟು ವಿರೋಧಗಳೂ ಇದ್ದವು. ಆದರೆ ನ್ಯಾಯದಾನ ವಿಳಂಬವಾಗಬಾರದು ಹಾಗೂ ನ್ಯಾಯವನ್ನು ಜನರ ಬಳಿಗೆ ಕೊಂಡೊಯ್ಯಬೇಕೆನ್ನುವ ಉದ್ದೇಶದಿಂದ ಎರಡು ಪೀಠಗಳನ್ನು ಸ್ಥಾಪಿಸಬೇಕಾಯಿತು ಎಂದು ಅವರು ತಿಳಿಸಿದರು.
ಕಾರ್ಯಕ್ರವದಲ್ಲಿ ನ್ಯಾಯಮೂರ್ತಿಗಳಾದ ಮಂಜುಳಾ ಚೆಲ್ಲೂರು, ಬನ್ನೂರು ಮಠ, ಕೆ.ಸಿ.ಮಂಜುನಾಥ್, ವಿ.ಗೋಪಾಲಗೌಡ ಉಪಸ್ಥಿತರಿದ್ದರು.
|