ರಸಗೊಬ್ಬರ ಸಮಸ್ಯೆ ಕುರಿತು ಕೇಂದ್ರಕ್ಕೆ ವಿವರಿಸುವ ಸಲುವಾಗಿ ಮುಖ್ಯಮಂತ್ರಿ ಯಡಿಯೂರಪ್ಪ ಒಯ್ಯುವ ನಿಯೋಗದೊಂದಿಗೆ ತೆರಳಲು ಜೆಡಿಎಸ್ ಮತ್ತು ಕಾಂಗ್ರೆಸ್ ನಿರಾಕರಿಸಿವೆ. ಮಂಗಳವಾರ ನಡೆದ ಪ್ರತ್ಯೇಕ ಪತ್ರಿಕಾಗೋಷ್ಠಿಗಳಲ್ಲಿ ಮಲ್ಲಿಕಾರ್ಜುನ ಖರ್ಗೆ ಮತ್ತು ಕುಮಾರಸ್ವಾಮಿ ಅವರು ಈ ವಿಷಯ ತಿಳಿಸಿದ್ದಾರೆ.
ಪ್ರತ್ಯೇಕ ನಿಯೋಗ: ಬಿಜೆಪಿ ನಿಯೋಗದೊಂದಿಗೆ ತೆರಳದೆ ಪ್ರತ್ಯೇಕ ನಿಯೋಗ ಕರೆದೊಯ್ಯುವುದಾಗಿ ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ಕುಮಾರಸ್ವಾಮಿ ಹೇಳಿದ್ದಾರೆ. ರಾಜ್ಯದಲ್ಲಿ ರಸಗೊಬ್ಬರ ಸಮಸ್ಯೆ ಇಲ್ಲ. ಬದಲಿಗೆ ಹೈದರಾಬಾದ್ ಕರ್ನಾಟಕಕ್ಕೆ ವಿಶೇಷ ಸ್ಥಾನಮಾನ. ಕನ್ನಡಕ್ಕೆ ಶಾಸ್ತ್ರೀಯ ಭಾಷಾ ಸ್ಥಾನಮಾನ ನೀಡುವುದು ಮತ್ತಿತರ ವಿಷಯಗಳನ್ನು ಕೇಂದ್ರ ಗೃಹಸಚಿವ ಶಿವರಾಜ್ ಪಾಟೀಲ್ ಅವರೊಂದಿಗೆ ಚರ್ಚಿಸುವುದಾಗಿ ಕುಮಾರಸ್ವಾಮಿ ಹೇಳಿದರು.
ನಿಯೋಗ ಅಗತ್ಯವಿಲ್ಲ: ಸಾಕಷ್ಟು ರಸಗೊಬ್ಬರವನ್ನು ಕೇಂದ್ರ ಸರ್ಕಾರ ರವಾನಿಸಿದೆ. ಈ ಕುರಿತು ರಾಮ್ವಿಲಾಸ್ ಪಾಸ್ವಾನ್ ಅವರು ಮಾಹಿತಿ ನೀಡಿದ್ದಾರೆ. ಆದರೆ, ವಿತರಣೆಯಲ್ಲಿ ನಿಯಂತ್ರಣ ಕಳೆದುಕೊಂಡಿರುವ ಸರಕಾರ ನಿಯೋಗ ಕರೆದೊಯ್ಯುತ್ತಿರುವುದು ಅನಗತ್ಯ ಎಂದು ಮಲ್ಲಿಕಾರ್ಜುನ ಖರ್ಗೆ ಟೀಕಿಸಿದ್ದಾರೆ.
|