ಮುಖ್ಯ ಪುಟ  ಸುದ್ದಿ ಜಗತ್ತು > ಸುದ್ದಿಗಳು > ರಾಜ್ಯ ಸುದ್ದಿ
ಸಲಹೆ/ಪ್ರತಿಕ್ರಿಯೆಮಿತ್ರನಿಗೆ ಕಳುಹಿಸಿಈ ಪುಟ ಮುದ್ರಿಸಿ
 
ಗೊಬ್ಬರಕ್ಕಾಗಿ ದಿಲ್ಲಿಗೆ ಹೋಗುತ್ತಿಲ್ಲ: ದೇವೇಗೌಡ  Search similar articles
ಸರ್ವಪಕ್ಷ ನಿಯೋಗವನ್ನು ಬಹಿಷ್ಕರಿಸುವ ಜೆಡಿಎಸ್ ಇಂದು ಬುಧವಾರ ಪ್ರತ್ಯೇಕವಾಗಿ ಪ್ರಧಾನ ಮಂತ್ರಿ ಹಾಗೂ ಕೃಷಿ ಸಚಿವರನ್ನು ಭೇಟಿ ಮಾಡಲು ನವದೆಹಲಿಗೆ ತೆರಳಿದೆ.

ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಎಚ್.ಡಿ. ದೇವೇಗೌಡ ನೇತೃತ್ವದಲ್ಲಿ ದೆಹಲಿಗೆ ತೆರಳಿರುವ ನಿಯೋಗವು ಪ್ರಧಾನ ಮಂತ್ರಿ ಮನಮೋಹನ್ ಸಿಂಗ್ ಹಾಗೂ ಕೃಷಿ ಸಚಿವ ಶರದ್ ಪವಾರ್ ಅವರನ್ನು ಭೇಟಿ ಮಾಡಿ ಮಾತುಕತೆ ನಡೆಸಲಿದೆ.

ಅಲ್ಲದೆ, ಕನ್ನಡಕ್ಕೆ ಶಾಸ್ತ್ರೀಯ ಸ್ಥಾನಮಾನ, ಸಹಕಾರಿ ಸಂಘಗಳ ಸಾಲ ಮರುಪಾವತಿ, ಹೈದರಾಬಾದ್-ಕರ್ನಾಟಕಕ್ಕೆ ವಿಶೇಷ ಸ್ಥಾನಮಾನ ಹಾಗೂ ರೈತರಿಗೆ ಪೂರಕವಾಗುವಂತೆ ವಿಶೇಷ ಪ್ಯಾಕೇಜ್ ನೀಡುವಂತೆ ನಿಯೋಗವು ಮನವಿ ಸಲ್ಲಿಸಲಿದೆ ಎಂದು ಪಕ್ಷದ ಮೂಲಗಳು ತಿಳಿಸಿವೆ.

ದೆಹಲಿಗೆ ತೆರಳುವ ಮುನ್ನ ಸುದ್ದಿಗಾರರೊಂದಿಗೆ ಮಾತನಾಡಿದ ದೇವೇಗೌಡರು, ಮಾತುಕತೆ ವೇಳೆ ರಾಜ್ಯದಲ್ಲಿ ಕಾಣಿಸಿಕೊಂಡಿರುವ ರಸಗೊಬ್ಬರ ಸಮಸ್ಯೆ ಕುರಿತು ಚರ್ಚಿಸುವುದಿಲ್ಲ. ರಾಜ್ಯದಲ್ಲಿ ಸಾಕಷ್ಟು ರಸಗೊಬ್ಬರ ಇದೆ. ಆದರೆ ರಸಗೊಬ್ಬರ ಹಂಚಿಕೆಯಲ್ಲಿ ರಾಜ್ಯ ಸರ್ಕಾರ ವಿಫಲವಾಗಿದೆ ಎಂದು ತಿಳಿಸಿದ್ದಾರೆ.

ರಸಗೊಬ್ಬರಕ್ಕಾಗಿ ನಿಯೋಗವೊಂದು ದೆಹಲಿಗೆ ತೆರಳುವ ಅಗತ್ಯವಿಲ್ಲ ಎಂದು ಪ್ರತಿಪಾದಿಸಿದ ಅವರು, ರಸಗೊಬ್ಬರಕ್ಕಾಗಿ ಸಂಸತ್ ಮುಂದೆ ಧರಣಿ ನಡೆಸಬೇಕಾದ ಅವಶ್ಯಕತೆ ತಮಗಿಲ್ಲ ಎಂದು ತಿಳಿಸಿದ್ದಾರೆ.
ಮತ್ತಷ್ಟು
ಟ್ರಕ್ ಮುಷ್ಕರ: ರಾಜ್ಯದಲ್ಲಿ ಮಿಶ್ರ ಪ್ರತಿಕ್ರಿಯೆ
3 ತಿಂಗಳೊಳಗೆ ಬೆಂಗಳೂರು ಪಾಲಿಕೆ ಚುನಾವಣೆಗೆ ಆದೇಶ
ಕನ್ನಡ ಕಡ್ಡಾಯ ಅನಗತ್ಯ: ಹೈಕೋರ್ಟ್ ಮಹತ್ವದ ತೀರ್ಪು
ಶಂಕಿತ ಉಗ್ರರ ವಿಚಾರಣೆ ಜಿಲ್ಲಾ ನ್ಯಾಯಾಲಯಕ್ಕೆ
ಜಾತ್ಯತೀತ ಶಕ್ತಿಗಳ ಮೈತ್ರಿಗೆ ಬಂಗಾರಪ್ಪ ಸಲಹೆ
3 ಲಕ್ಷ ಮಂದಿಗೆ ಚಿಕೂನ್‌ಗುನ್ಯಾ: ಕರಂದ್ಲಾಜೆ