ಮುಖ್ಯ ಪುಟ  ಸುದ್ದಿ ಜಗತ್ತು > ಸುದ್ದಿಗಳು > ರಾಜ್ಯ ಸುದ್ದಿ
ಸಲಹೆ/ಪ್ರತಿಕ್ರಿಯೆಮಿತ್ರನಿಗೆ ಕಳುಹಿಸಿಈ ಪುಟ ಮುದ್ರಿಸಿ
 
ಬೆಂಗಳೂರಿಗೆ ವಿದ್ಯುತ್: ಕಾಮಗಾರಿ ಪೂರ್ಣಗೊಳಿಸಲು ಸೂಚನೆ  Search similar articles
ಬೆಂಗಳೂರು ಮಹಾನಗರಕ್ಕೆ ಉತ್ತಮ ಗುಣಮಟ್ಟದ ವಿದ್ಯುತ್ ಪೂರೈಸುವ ನಿಟ್ಟಿನಲ್ಲಿ 920 ಕೋಟಿ ರೂ. ವೆಚ್ಚದಲ್ಲಿ ಹಮ್ಮಿಕೊಂಡಿರುವ ಕಾಮಗಾರಿಗಳನ್ನು ತ್ವರಿತವಾಗಿ ಪೂರ್ಣಗೊಳಿಸುವಂತೆ ಅಧಿಕಾರಿಗಳಿಗೆ ಇಂಧನ ಸಚಿವ ಕೆ.ಎಸ್. ಈಶ್ವರಪ್ಪ ಸೂಚನೆ ನೀಡಿದ್ದಾರೆ.

ನಗರದ ವಿವಿಧೆಡೆಗಳಲ್ಲಿ ಸ್ಥಾಪಿಸಲಾಗಿರುವ ವಿದ್ಯುತ್ ವಿತರಣಾ ಕೇಂದ್ರಗಳಿಗೆ ಬುಧವಾರ ಭೇಟಿ ನೀಡಿ ಪರಿಶೀಲನೆ ನಡೆಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡುತ್ತಿದ್ದರು.

220 ಕಿಲೋವ್ಯಾಟ್ ವಿದ್ಯುತ್ ವಿತರಣೆ ಕೇಂದ್ರಗಳನ್ನು 8 ಸ್ಥಳಗಳಲ್ಲಿ 550 ಕೋಟಿ ರೂ. ವೆಚ್ಚದಲ್ಲಿ ಸ್ಥಾಪಿಸುವ ಕಾಮಗಾರಿ ಈಗಾಗಲೇ ಮುಗಿಯಬೇಕಿತ್ತು. ಆದರೆ ಕೆಲ ತಾಂತ್ರಿಕ ಕಾರಣಗಳಿಂದ ವಿಳಂಬವಾಗಿದೆ. ಇಂತಹ ಕಾಮಗಾರಿಗಳನ್ನು ಶೀಘ್ರವೇ ಪೂರ್ಣಗೊಳಿಸುವಂತೆ ಅಧಿಕಾರಿಗಳಿಗೆ ಅವರು ಸೂಚಿಸಿದ್ದಾರೆ.

ಇದೇ ಸಂದರ್ಭದಲ್ಲಿ ರೈತರಿಗೆ ಉಚಿತ ವಿದ್ಯುತ್ ನೀಡುವ ಕುರಿತು ಮಾತನಾಡಿದ ಅವರು, ಕೃಷಿ ಚಟುವಟಿಕೆಗಳ ಪಂಪ್ ಸೆಟ್‌ಗಳಿಗೆ ಉಚಿತ ವಿದ್ಯುತ್ ಒದಗಿಸಲು 850 ಕೋಟಿ ರೂ. ವೆಚ್ಚವಾಗುತ್ತದೆ. ಆದರೂ, ರೈತರಿಗೆ ಉಚಿತ ವಿದ್ಯುತ್ ಒದಗಿಸಲು ಬಜೆಟಿನಲ್ಲಿ ಮುಖ್ಯಮಂತ್ರಿಗಳು ಅನುದಾನ ನೀಡಲಿದ್ದಾರೆ ಎಂಬ ವಿಶ್ವಾಸವನ್ನು ವ್ಯಕ್ತಪಡಿಸಿದರು.

ಕೊಪ್ಪಳ ವರದಿ: ಸಮರ್ಪಕವಾಗಿ ವಿದ್ಯುತ್ ಪೂರೈಕೆ ಮಾಡುತ್ತಿಲ್ಲವೆಂದು ಆರೋಪಿಸಿ ಕೊಪ್ಪಳ ಶಾಸಕರ ನೇತೃತ್ವದಲ್ಲಿ ಬುಧವಾರ ಕೆಪಿಟಿಸಿಎಲ್ ಕಚೇರಿ ಮುಂದೆ ಪ್ರತಿಭಟನೆ ನಡೆಸಿದರು.

ಶಾಸಕ ಕರಡಿ ಸಂಗಣ್ಣ ಅವರ ನೇತೃತ್ವದಲ್ಲಿ ನೂರಾರು ಪ್ರತಿಭಟನಾಕಾರರು ನಡೆಸಿದ ಧರಣಿಯಲ್ಲಿ ರೈತರಿಗೆ ಸಮರ್ಪಕವಾಗಿ ವಿದ್ಯುತ್ ಪೂರೈಸುವಂತೆ ಆಗ್ರಹಿಸಿದರು. ಕೊಪ್ಪಳ ಜಿಲ್ಲೆಗೆ 300 ಮೆಗಾವ್ಯಾಟ್ ವಿದ್ಯುತ್ ಅಗತ್ಯವಿದೆ. ಆದರೆ ಈಗ ಜಿಲ್ಲೆಗೆ ಕೇವಲ 30 ಮೆಗಾವ್ಯಾಟ್ ವಿದ್ಯುತ್ ನೀಡಲಾಗುತ್ತಿದೆ ಎಂದು ಪ್ರತಿಭಟನಾಕಾರರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಮತ್ತಷ್ಟು
ಗೊಬ್ಬರಕ್ಕಾಗಿ ದಿಲ್ಲಿಗೆ ಹೋಗುತ್ತಿಲ್ಲ: ದೇವೇಗೌಡ
ಟ್ರಕ್ ಮುಷ್ಕರ: ರಾಜ್ಯದಲ್ಲಿ ಮಿಶ್ರ ಪ್ರತಿಕ್ರಿಯೆ
3 ತಿಂಗಳೊಳಗೆ ಬೆಂಗಳೂರು ಪಾಲಿಕೆ ಚುನಾವಣೆಗೆ ಆದೇಶ
ಕನ್ನಡ ಕಡ್ಡಾಯ ಅನಗತ್ಯ: ಹೈಕೋರ್ಟ್ ಮಹತ್ವದ ತೀರ್ಪು
ಶಂಕಿತ ಉಗ್ರರ ವಿಚಾರಣೆ ಜಿಲ್ಲಾ ನ್ಯಾಯಾಲಯಕ್ಕೆ
ಜಾತ್ಯತೀತ ಶಕ್ತಿಗಳ ಮೈತ್ರಿಗೆ ಬಂಗಾರಪ್ಪ ಸಲಹೆ