ಮುಖ್ಯ ಪುಟ  ಸುದ್ದಿ ಜಗತ್ತು > ಸುದ್ದಿಗಳು > ರಾಜ್ಯ ಸುದ್ದಿ
ಸಲಹೆ/ಪ್ರತಿಕ್ರಿಯೆಮಿತ್ರನಿಗೆ ಕಳುಹಿಸಿಈ ಪುಟ ಮುದ್ರಿಸಿ
 
ಕನ್ನಡ ಕಡ್ಡಾಯ ಅನಗತ್ಯ: ಹೈಕೋರ್ಟ್ ತೀರ್ಪಿಗೆ ವಿರೋಧ  Search similar articles
ಪ್ರಾಥಮಿಕ ಶಿಕ್ಷಣದಲ್ಲಿ ಕನ್ನಡ ಮಾಧ್ಯಮ ಕಡ್ಡಾಯವಲ್ಲ ಎಂಬ ಹೈಕೋರ್ಟ್ ತೀರ್ಪಿಗೆ ರಾಜ್ಯಾದ್ಯಂತ ವ್ಯಾಪಕ ವಿರೋಧ ವ್ಯಕ್ತವಾಗಿದೆ.

ಕನ್ನಡ ಅಭಿವೃದ್ದಿ ಪ್ರಾಧಿಕಾರದ ಅಧ್ಯಕ್ಷರಾದ ಮುಖ್ಯಮಂತ್ರಿ ಚಂದ್ರು, ಹೈಕೋರ್ಟ್ ತೀರ್ಪಿನಿಂದ ಕನ್ನಡ ಮತ್ತು ಕರ್ನಾಟಕಕ್ಕೆ ಅನ್ಯಾಯವಾಗಿದೆ. ಮಾತೃಭಾಷೆಯಲ್ಲಿಯೇ ಶಿಕ್ಷಣ ನೀಡಬೇಕೆಂದು ಸಂವಿಧಾನದಲ್ಲಿಯೇ ತಿಳಿಸಲಾಗಿದೆ ಎಂದು ತಿಳಿಸಿದ್ದಾರೆ.

ಮುಕ್ತ ಮಾರುಕಟ್ಟೆಯ ಖಾಸಗೀಕರಣ ನೀತಿಯು ಶಿಕ್ಷಣ ಕ್ಷೇತ್ರದಲ್ಲೂ ಈಗ ಕಂಡು ಬಂದಿರುವುದು ದುರದೃಷ್ಟಕರ ಎಂದು ಪ್ರತಿಕ್ರಿಯಿಸಿದ ಹಿರಿಯ ಸಾಹಿತಿ ಪ್ರೊ| ಬರಗೂರು ರಾಮಚಂದ್ರಪ್ಪ, ಹೈಕೋರ್ಟ್ ತೀರ್ಪಿಗೆ ರಾಜ್ಯ ಸರ್ಕಾರ ತಡೆಯಾಜ್ಞೆ ನೀಡಬೇಕು. ಬಡವರಿಗೊಂದು ಶಿಕ್ಷಣ ಉಳ್ಳವರಿಗೊಂದು ಶಿಕ್ಷಣ ಎಂಬ ನೀತಿಗೆ ಕಡಿವಾಣ ಹಾಕಬೇಕು ಎಂದು ತಿಳಿಸಿದ್ದಾರೆ.

ಭಾಷಾ ನೀತಿ ಕಾಪಾಡಲು ನಾವು ಬದ್ಧ. ಸದ್ಯದಲ್ಲೇ ಸಾಹಿತಿ, ಕನ್ನಡಪರ ಸಂಸ್ಥೆ, ಹೋರಾಟಗಾರರು ಶಿಕ್ಷಣ ತಜ್ಞರು ಅಧಿಕಾರಿಗಳ ಸಭೆ ನಡೆಸಿ ಮುಂದಿನ ನಿರ್ಧಾರ ಕೈಗೊಳ್ಳಲಾಗುವುದು ಎಂದು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ವಿಶ್ವೇಶ್ವರ ಹೆಗಡೆ ಕಾಗೇರಿ ತಿಳಿಸಿದ್ದಾರೆ.
ಮತ್ತಷ್ಟು
ಭಾರತ್ ಬಂದ್: ರಾಜ್ಯಾದ್ಯಂತ ಮಿಶ್ರ ಪ್ರತಿಕ್ರಿಯೆ
ಬೆಂಗಳೂರಿಗೆ ವಿದ್ಯುತ್: ಕಾಮಗಾರಿ ಪೂರ್ಣಗೊಳಿಸಲು ಸೂಚನೆ
ಗೊಬ್ಬರಕ್ಕಾಗಿ ದಿಲ್ಲಿಗೆ ಹೋಗುತ್ತಿಲ್ಲ: ದೇವೇಗೌಡ
ಟ್ರಕ್ ಮುಷ್ಕರ: ರಾಜ್ಯದಲ್ಲಿ ಮಿಶ್ರ ಪ್ರತಿಕ್ರಿಯೆ
3 ತಿಂಗಳೊಳಗೆ ಬೆಂಗಳೂರು ಪಾಲಿಕೆ ಚುನಾವಣೆಗೆ ಆದೇಶ
ಕನ್ನಡ ಕಡ್ಡಾಯ ಅನಗತ್ಯ: ಹೈಕೋರ್ಟ್ ಮಹತ್ವದ ತೀರ್ಪು