ಮುಖ್ಯ ಪುಟ  ಸುದ್ದಿ ಜಗತ್ತು > ಸುದ್ದಿಗಳು > ರಾಜ್ಯ ಸುದ್ದಿ
ಸಲಹೆ/ಪ್ರತಿಕ್ರಿಯೆಮಿತ್ರನಿಗೆ ಕಳುಹಿಸಿಈ ಪುಟ ಮುದ್ರಿಸಿ
 
ಲಾರಿ ಮುಷ್ಕರ: ಮಾತುಕತೆಗೆ ಮುಂದಾಗಲು ಮನವಿ  Search similar articles
ವಿವಿಧ ಬೇಡಿಕೆ ಈಡೇರಿಕೆಗೆ ಒತ್ತಾಯಿಸಿ ದೇಶಾದ್ಯಂತ ನಡೆಸುತ್ತಿರುವ ಲಾರಿ ಮುಷ್ಕರದಿಂದಾಗಿ ರಾಜ್ಯದಲ್ಲಿ ಅಗತ್ಯ ವಸ್ತುಗಳ ಸಾಗಾಣಿಕೆಗೆ ವ್ಯವಸ್ಥೆ ಕಲ್ಪಿಸಲು ರಾಜ್ಯ ಸರ್ಕಾರ ಚಿಂತನೆ ನಡೆಸಿದೆ.

ಈ ಬಗ್ಗೆ ಮಾಹಿತಿ ನೀಡಿರುವ ಸಾರಿಗೆ ಸಚಿವ ಆರ್. ಅಶೋಕ್, ಬಸ್‌ಗಳಲ್ಲಿ ಅಗತ್ಯ ವಸ್ತುಗಳ ಸಾಗಾಣಿಕೆಗೆ ವ್ಯವಸ್ಥೆ ಕಲ್ಪಿಸಲಾಗುವುದು. ಲಾರಿ ಮಾಲೀಕರ ಮುಷ್ಕರದ ಹಿನ್ನೆಲೆಯಲ್ಲಿ ಸಾರ್ವಜನಿಕರಿಗೆ ತೊಂದರೆಯಾಗಬಾರದೆಂಬ ನಿಟ್ಟಿನಲ್ಲಿ ಸರ್ಕಾರ ಈ ಕ್ರಮ ಕೈಗೊಂಡಿದೆ ಎಂದು ತಿಳಿಸಿದ್ದಾರೆ.

ವೇಗ ನಿಯಂತ್ರಕ ಕಡ್ಡಾಯಕ್ಕೆ ಸಂಬಂಧಿಸಿದಂತೆ ಹೈಕೋರ್ಟ್ ನೀಡಿರುವ ತೀರ್ಪಿನ ಕುರಿತು ಅಧಿಕಾರಿಗಳೊಂದಿಗೆ ಚರ್ಚಿಸಿ ಸರ್ಕಾರ ಶೀಘ್ರವೇ ಮುಂದಿನ ಕ್ರಮ ಕೈಗೊಳ್ಳಲಿದೆ ಎಂದು ಅವರು ತಿಳಿಸಿದರು.

ಈ ಹಿನ್ನೆಲೆಯಲ್ಲಿ ಮುಷ್ಕರವನ್ನು ಹಿಂದಕ್ಕೆ ಪಡೆದು ಸರ್ಕಾರದ ಜೊತೆಯಲ್ಲಿ ಮಾತುಕತೆಗೆ ಮುಂದಾಗಬೇಕೆಂದು ಲಾರಿ ಮಾಲೀಕರು ಒಕ್ಕೂಟಕ್ಕೆ ಮನವಿ ಮಾಡಿದ ಅವರು, ಮಾತುಕತೆ ಮೂಲಕ ಈ ಸಮಸ್ಯೆ ಬಗೆಹರಿಸಬಹುದೆಂದು ತಿಳಿಸಿದ್ದಾರೆ.

ಮುಷ್ಕರದಿಂದ ಜನಜೀವನ ಅಸ್ತವ್ಯಸ್ಥ
ಲಾರೀ ಮಾಲೀಕರ ಮುಷ್ಕರದಿಂದ ಅಗತ್ಯ ವಸ್ತುಗಳ ಸರಬರಾಜಿನಲ್ಲಿ ಭಾರಿ ವ್ಯತ್ಯಯ ಕಂಡು ಬಂದಿದ್ದು, ಹೆಚ್ಚಿನ ಕಡೆಗಳಲ್ಲಿ ಅಗತ್ಯ ವಸ್ತುಗಳ ಪೂರೈಕೆ ಸಾಧ್ಯವಾಗಿಲ್ಲ.
ಮತ್ತಷ್ಟು
ಕನ್ನಡ ಕಡ್ಡಾಯ ಅನಗತ್ಯ: ಹೈಕೋರ್ಟ್ ತೀರ್ಪಿಗೆ ಖಂಡನೆ
ಭಾರತ್ ಬಂದ್: ರಾಜ್ಯಾದ್ಯಂತ ಮಿಶ್ರ ಪ್ರತಿಕ್ರಿಯೆ
ಬೆಂಗಳೂರಿಗೆ ವಿದ್ಯುತ್: ಕಾಮಗಾರಿ ಪೂರ್ಣಗೊಳಿಸಲು ಸೂಚನೆ
ಗೊಬ್ಬರಕ್ಕಾಗಿ ದಿಲ್ಲಿಗೆ ಹೋಗುತ್ತಿಲ್ಲ: ದೇವೇಗೌಡ
ಟ್ರಕ್ ಮುಷ್ಕರ: ರಾಜ್ಯದಲ್ಲಿ ಮಿಶ್ರ ಪ್ರತಿಕ್ರಿಯೆ
3 ತಿಂಗಳೊಳಗೆ ಬೆಂಗಳೂರು ಪಾಲಿಕೆ ಚುನಾವಣೆಗೆ ಆದೇಶ