ಅಮರನಾಥ್ ದೇವಾಲಯ ವಿವಾದಕ್ಕೆ ಸಂಬಂಧಿಸಿದಂತೆ ವಿಶ್ವ ಹಿಂದೂ ಪರಿಷತ್ ಕರೆನೀಡಿದ್ದ ಬಂದ್ ಕೆಲ ಕಡೆ ಹಿಂಸಾ ರೂಪ ತಾಳಿದೆ.
ನಗರದ ಕ್ಲಬ್ ರೋಡ್‌ನಲ್ಲಿರುವ ನೀರಾವರಿ ಇಲಾಖೆ ಕಚೇರಿ ಮುಚ್ಚುವಂತೆ ಆಗ್ರಹಿಸಿದ ಬಿಜೆಪಿ ಕಾರ್ಯಕರ್ತರು ಕಚೇರಿ ಸಿಬ್ಬಂದಿ ಮೇಲೆ ಹಲ್ಲೆ ನಡೆಸಿದ್ದಾರೆ. ಇದರಿಂದ ಸ್ಥಳದಲ್ಲಿ ಪರಿಸ್ಥಿತಿ ಬಿಗುವಿನಿಂದ ಕೂಡಿದ್ದು, ಪ್ರದೇಶದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಪೊಲೀಸರನ್ನು ನೇಮಕ ಮಾಡಲಾಗಿದೆ.
ಶಾಸಕ ಅಭಯ್ ಪಾಟೀಲ್ ನೇತೃತ್ವದಲ್ಲಿ ಬಿಜೆಪಿ ಕಾರ್ಯಕರ್ತರು ನಗರದಲ್ಲಿನ ನೀರಾವರಿ ಕಚೇರಿಗೆ ಏಕಾಏಕಿ ನುಗ್ಗಿ ಅಧಿಕಾರಿಗಳ ಮೇಲೆ ಹಲ್ಲೆ ನಡೆಸಿದ್ದಾರೆ. ಕಚೇರಿ ಅಧಿಕಾರಿಗಳನ್ನು ಹೊರಗೆ ಎಳೆತಂದು ಕಾರ್ಯಕರ್ತರು ಥಳಿಸಿದ್ದಾರೆ. ಅಲ್ಲದೆ, ಕಾರ್ಯಕರ್ತರು ಕಚೇರಿಯಲ್ಲಿ ಪೀಠೋಪಕರಣ ಧ್ವಂಸಗೊಳಿಸಿದ್ದಾರೆ. ಕೂಡಲೇ ಸ್ಥಳಕ್ಕಾಗಮಿಸಿದ ಪೊಲೀಸರು ಪರಿಸ್ಥಿತಿಯನ್ನು ನಿಯಂತ್ರಿಸುವಲ್ಲಿ ಯಶಸ್ವಿಯಾಗಿದ್ದಾರೆ.
ಬೆಂಗಳೂರು ವರದಿ: ರಾಜ್ಯದೆಲ್ಲೆಡೆ ಹಬ್ಬಿರುವ ಭಾರತ ಬಂದ್‌ಗೆ ಬೆಂಗಳೂರು ಮುಂಜಾನೆ ಮೌನವಾಗಿತ್ತು. ಆದರೆ ಸಮಯ ಕಳೆದಂತೆ ಮುಷ್ಕರದ ಕಾವು ಏರತೊಡಗಿತು. ನಗರದ ಮಲ್ಲೇಶ್ವರಂ ವೃತ್ತದಲ್ಲಿ ಬಿಜೆಪಿ ಕಾರ್ಯಕರ್ತರು ಜಮ್ಮು ಕಾಶ್ಮೀರ ಮುಖ್ಯಮಂತ್ರಿ ಗುಲಾಂ ನಬಿ ಅಜಾದ್ ಪ್ರತಿಕೃತಿಯನ್ನು ದಹಿಸಿ ಪ್ರತಿಭಟನೆ ನಡೆಸಿದ್ದಾರೆ.
|