ಖಾಸಗಿ ಅನುದಾನಿತ ಶಾಲೆಗಳಲ್ಲಿ ಕನ್ನಡ ಭಾಷೆ ಕಡ್ಡಾಯವಿಲ್ಲ ಎಂದು ಹೈಕೋರ್ಟ್ ತೀರ್ಪಿನ ವಿರುದ್ಧ ಕನ್ನಡಪರ ಹೋರಾಟಗಾರರು, ಸಾಹಿತಿಗಳು, ಬುದ್ದಿ ಜೀವಿಗಳು ಸುಪ್ರಿಂ ಕೋರ್ಟ್ ಮೇಟ್ಟಲೇರಲು ನಿರ್ಧರಿಸಿವೆ.
ಹೈಕೋರ್ಟ್ ಆದೇಶದ ಕುರಿತು ಪ್ರತಿಕ್ರಿಯಿಸಿರುವ ಕರ್ನಾಟಕ ರಕ್ಷಣಾ ವೇದಿಕೆ ರಾಜ್ಯಾಧ್ಯಕ್ಷ ಟಿ.ಎ. ನಾರಾಯಣ ಗೌಡ, ನ್ಯಾಯಾಲಯ ಮತ್ತು ನ್ಯಾಯಾಧೀಶರ ಬಗ್ಗೆ ನಮಗೆ ಅಪಾರ ಗೌರವವಿದೆ. ಆದರೆ ಕನ್ನಡಕ್ಕೆ ಧಕ್ಕೆ ಬಂದಾಗ ಸುಮ್ಮನೆ ಕೂರುವುದಿಲ್ಲ ಎಂದು ತಿಳಿಸಿದ್ದಾರೆ.
ಈ ಹಿನ್ನೆಲೆಯಲ್ಲಿ ಈಗಾಗಲೇ ನ್ಯಾಯಾಲಯ ತೀರ್ಪನ್ನು ಪ್ರಶ್ನಿಸಿ, ಮೇಲ್ಮನವಿ ಸಲ್ಲಿಸುವ ಸಂಬಂಧದ ಕುರಿತು ಕಾನೂನು ತಜ್ಞರೊಂದಿಗೆ ಸಮಾಲೋಚನೆ ನಡೆಸುತ್ತಿರುವುದಾಗಿ ತಿಳಿಸಿದ ಅವರು, ಈ ಬಗ್ಗೆ ಚರ್ಚೆ ನಡೆಸಲು ಇದೇ ಶನಿವಾರದಂದು ತುರ್ತು ಸಭೆ ಕರೆಯಲಾಗಿದೆ. ಸಭೆಗೆ ಸಾಹಿತಿಗಳು, ಬುದ್ದಿಜೀವಿಗಳು, ಕನ್ನಡಪರ ಹೋರಾಟಗಾರರು ಹಾಗೂ ಶಿಕ್ಷಣ ತಜ್ಞರು ಭಾಗವಹಿಸಲಿದ್ದಾರೆ ಎಂದು ತಿಳಿಸಿದ್ದಾರೆ.
ಹೈಕೋರ್ಟ್ ತೀರ್ಪಿನ ಬಗ್ಗೆ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪನವರು ಕೂಡ ವಿಷಾದ ವ್ಯಕ್ತಪಡಿಸಿದ್ದು, ಶೀಘ್ರವೇ ತಜ್ಞರೊಂದಿಗೆ ಸಮಾಲೋಚನೆ ನಡೆಸಲಾಗುವುದು ಎಂದು ತಿಳಿಸಿದ್ದಾರೆ.
|