ಅಮರನಾಥ ಕ್ಷೇತ್ರದ ಭೂ ವಿವಾದಕ್ಕೆ ಸಂಬಂಧಪಟ್ಟಂತೆ ವಿಶ್ವ ಹಿಂದೂ ಪರಿಷತ್ ಗುರುವಾರ ದೇಶಾದ್ಯಂತ ಕರೆ ನೀಡಿದ್ದ ಬಂದ್‌ಗೆ, ಬೆಳಗಾವಿಯಲ್ಲಿ ನಡೆದ ಹಿಂಸಾತ್ಮಕ ಘಟನೆ ಹೊರತು ಪಡಿಸಿದರೆ, ರಾಜ್ಯದಲ್ಲಿ ಉತ್ತಮ ಪ್ರತಿಕ್ರಿಯೆ ಕಂಡು ಬಂದಿತು.
ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಪ್ರತಿಭಟನೆಗೆ ಪೂರಕ ಪ್ರತಿಕ್ರಿಯೆ ವ್ಯಕ್ತವಾಗಿತ್ತು. ಮುಂಜಾನೆಯಿಂದಲೇ ಅಂಗಡಿ ಮುಂಗಟ್ಟುಗಳು ಮುಚ್ಚುವ ಮೂಲಕ ಬಂದ್‌ಗೆ ಬೆಂಬಲ ಸೂಚಿಸಿದವು. ಕೋಲಾರದಲ್ಲಿ ರಸ್ತೆಗಿಳಿದ ವಿಎಚ್‌ಪಿ ಕಾರ್ಯಕರ್ತರು ಜಮ್ಮು ಕಾಶ್ಮೀರ ಸರ್ಕಾರ ವಿರುದ್ಧ ಘೋಷಣೆಗಳನ್ನು ಕೂಗಿ ಪ್ರತಿಭಟನೆ ನಡೆಸಿದರು.
ಈ ಮಧ್ಯೆ, ಇಂದು ರಾಜ್ಯಾದ್ಯಂತ ದ್ವಿತೀಯ ಪಿಯುಸಿ ಪರೀಕ್ಷೆ ನಡೆಯುತ್ತಿದ್ದರಿಂದ ವಿದ್ಯಾರ್ಥಿಗಳು ಬಂದ್‌ನಿಂದಾಗಿ ಪರೀಕ್ಷೆಗೆ ಹಾಜರಾಗಲು ಸಾಧ್ಯವಾಗಲಿಲ್ಲ. ಕೋಲಾರ ಜಿಲ್ಲೆಯೊಂದರ ಕಾಲೇಜಿನಲ್ಲಿ ಸುಮಾರು 40ಕ್ಕೂ ಅಧಿಕ ವಿದ್ಯಾರ್ಥಿಗಳು ಪರೀಕ್ಷೆಗೆ ಗೈರು ಹಾಜರಾಗಿದ್ದರು. ಬಂದ್‌ನಿಂದಾಗಿ ದ್ವಿತೀಯ ಪಿಯುಸಿ ಪರೀಕ್ಷೆಗೆ ಪೂರಕ ವ್ಯವಸ್ಥೆ ಕಲ್ಪಿಸದ ಬಗ್ಗೆ ವಿದ್ಯಾರ್ಥಿಗಳು ಹಾಗೂ ಪೋಷಕರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.
|