ಜೆಡಿಎಸ್-ಬಿಜೆಪಿ ಸಮ್ಮಿಶ್ರ ಸರ್ಕಾರದಲ್ಲಿ ಮುಖ್ಯಮಂತ್ರಿಯಾಗಿದ್ದ ಎಚ್.ಡಿ. ಕುಮಾರಸ್ವಾಮಿ ಅವರನ್ನು ಪೇಚಿಗೆ ಸಿಲುಕಿಸಿದ ಗಣಿ ಹಗರಣ ಈಗ ಮತ್ತೆ ಜೀವ ಪಡೆದುಕೊಂಡಿದೆ.
ಈ ಬಗ್ಗೆ ಸ್ವತಃ ಎಚ್.ಡಿ. ಕುಮಾರಸ್ವಾಮಿ ಅವರೇ ಗಣಿ ಹಗರಣದ ಕುರಿತು ತನಿಖೆ ನಡೆಸುವಂತೆ ಸರ್ಕಾರವನ್ನು ಆಗ್ರಹಿಸಿದ್ದಾರೆ. ತಮ್ಮ ನಿವಾಸದಲ್ಲಿ ಶುಕ್ರವಾರ ಭೇಟಿ ಮಾಡಿದ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಗಣಿ ಹಗರಣದ ಕುರಿತು ಸರ್ಕಾರ ತನಿಖೆ ನಡೆಸಿ ಮಾಹಿತಿಯನ್ನು ಬಹಿರಂಗಪಡಿಸಲಿ ಎಂದು ಒತ್ತಾಯಿಸಿದ್ದಾರೆ.
ರೈತರ ಸಾಲಮನ್ನಾ ಮರುಪಾವತಿಗೆ ಕೇಂದ್ರ ಸರ್ಕಾರದ ಮೊರೆ ಹೋಗಿರುವ ಬಿಜೆಪಿ ಬಗ್ಗೆ ತೀವ್ರ ಆಕ್ರೋಶ ವ್ಯಕ್ತಪಡಿಸಿದ ಅವರು, ಇದು ಮುಖ್ಯಮಂತ್ರಿಯವರ ಮೂರ್ಖತನದ ಪರಮಾವಧಿಯಾಗಿದೆ ಎಂದು ಟೀಕಿಸಿದರು.
ಬಿಜೆಪಿ ಪ್ರಣಾಳಿಕೆಯಲ್ಲಿ ಹಾಗೂ ಅಧಿಕಾರದ ಗದ್ದುಗೆ ಏರಿದ ಸಂದರ್ಭದಲ್ಲಿ ರೈತರ ಹಾಗೂ ಜನಪರ ಯೋಜನೆಗಳನ್ನು ತಿಳಿಸಿದ ಬಿಜೆಪಿ, ಈಗ ಯಾವುದನ್ನೂ ಅನುಷ್ಠಾನಗೊಸದೆ ನಗೆಪಾಟೀಲಿಗೆ ಒಳಗಾಗಿದೆ ಎಂದು ಅವರು ಬಿಜೆಪಿಯನ್ನು ತೀವ್ರ ತರಾಟೆಗೆ ತೆಗೆದುಕೊಂಡರು.
|