ಮುಖ್ಯ ಪುಟ  ಸುದ್ದಿ ಜಗತ್ತು > ಸುದ್ದಿಗಳು > ರಾಜ್ಯ ಸುದ್ದಿ
ಸಲಹೆ/ಪ್ರತಿಕ್ರಿಯೆಮಿತ್ರನಿಗೆ ಕಳುಹಿಸಿಈ ಪುಟ ಮುದ್ರಿಸಿ
 
ಪಾಲಿಕೆ ಚುನಾವಣೆ: ಬಿಜೆಪಿಯಿಂದ ಪ್ರಣಾಳಿಕೆ ಬಿಡುಗಡೆ  Search similar articles
ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ(ಬಿಬಿಎಂಪಿ) ಚುನಾವಣೆಗೆ ಬಿಜೆಪಿ ಸಕಲ ರೀತಿಯಲ್ಲೂ ಸಜ್ಜುಗೊಂಡಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಸದಾನಂದ ಗೌಡ ತಿಳಿಸಿದ್ದಾರೆ.

ನಗರದಲ್ಲಿ ಶುಕ್ರವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮಹಾನಗರ ಪಾಲಿಕೆ ಯಾವುದೇ ಸಂದರ್ಭದಲ್ಲಿಯೂ ಚುನಾವಣೆ ನಡೆಸಿದರೂ ಪಕ್ಷ ಎದುರಿಸಲು ಸಿದ್ದವಾಗಿದ್ದು, ಚುನಾವಣೆಯನ್ನು ಸವಾಲಾಗಿ ಸ್ವೀಕರಿಸಲಿದೆ ಎಂದು ತಿಳಿಸಿದ್ದಾರೆ.

ಪಾಲಿಕೆ ಚುನಾವಣೆಯ ಹಿನ್ನೆಲೆಯಲ್ಲಿ ಪಕ್ಷ ಪ್ರತ್ಯೇಕ ಪ್ರಣಾಳಿಕೆ ಬಿಡುಗಡೆ ಮಾಡಲಿದ್ದು, ಸಾಹಿತಿಗಳು, ವಿವಿಧ ಕ್ಷೇತ್ರಗಳ ಗಣ್ಯರು ಉದ್ಯಮದವರ ಸಲಹೆ ಸೂಚನೆಗಳನ್ನು ಪಡೆದುಕೊಂಡ ಬಳಿಕ ಪ್ರಣಾಳಿಕೆ ಬಿಡುಗಡೆ ಮಾಡಲಾಗುವುದು ಎಂದು ಅವರು ತಿಳಿಸಿದರು.

ಇದೇ ಸಂದರ್ಭದಲ್ಲಿ ವಿರೋಧ ಪಕ್ಷಗಳ ಮೇಲೆ ಹರಿಹಾಯ್ದ ಅವರು, ರಾಜ್ಯದ ವಿವಿಧ ಸಮಸ್ಯೆಗಳಿಗೆ ಸ್ಪಂದಿಸುವಂತೆ ಕೇಂದ್ರದ ಬಳಿ ಕರೆದೊಯ್ದಿದ್ದ ನಿಯೋಗದ ಜೊತೆ ಪಾಲ್ಗೊಳ್ಳದೆ ಸಣ್ಣತನದ ರಾಜಕಾರಣ ಮಾಡಿದ್ದಾರೆ ಎಂದು ಆರೋಪಿಸಿದರು.

ವಿರೋಧ ಪಕ್ಷಗಳ ಇಂತಹ ನಿಲುವು ತಮಗೆ ಬೇಸರ ತಂದಿದೆ ಎಂದ ಅವರು, ತಾವು ವಿರೋಧ ಪಕ್ಷದಲ್ಲಿದ್ದಾಗ ಇಂತಹ ಸಣ್ಣತನದ ರಾಜಕಾರಣ ಮಾಡಿರಲಿಲ್ಲ ಎಂದು ತಿಳಿಸಿದರು.
ಮತ್ತಷ್ಟು
ಉದ್ಘಾಟನೆಗೊಂಡ ಹೈಕೋರ್ಟ್ ಸಂಚಾರಿ ಪೀಠ
ಗಣಿ ಹಗರಣ: ಸಮಗ್ರ ತನಿಖೆಗೆ ಎಚ್‌ಡಿಕೆ ಒತ್ತಾಯ
ಯಡಿಯೂರಪ್ಪ ಸುಳ್ಳುಗಾರ: ಬಂಗಾರಪ್ಪ
10ಕೋಟಿ ರೂ. ಮೌಲ್ಯದ ಹೆರಾಯಿನ್ ವಶ
ಸಿಎಂ ಜೊತೆ ಸಾಹಿತಿಗಳು :ಕುಮಾರಸ್ವಾಮಿ ಕಿಡಿ
ಅಮರನಾಥ: ರಾಜ್ಯದಲ್ಲಿ ಶಾಂತಿಯುತ ಬಂದ್