ಮುಖ್ಯ ಪುಟ  ಸುದ್ದಿ ಜಗತ್ತು > ಸುದ್ದಿಗಳು > ರಾಜ್ಯ ಸುದ್ದಿ
ಸಲಹೆ/ಪ್ರತಿಕ್ರಿಯೆಮಿತ್ರನಿಗೆ ಕಳುಹಿಸಿಈ ಪುಟ ಮುದ್ರಿಸಿ
 
ಚುನಾವಣೆಗೆ ಸಜ್ಜಾಗಲು ಜೆಡಿಎಸ್ ಕಾರ್ಯತಂತ್ರ  Search similar articles
ಶೀಘ್ರದಲ್ಲಿ ಬರಲಿರುವ ಬಿಬಿಎಂಪಿ ಚುನಾವಣೆ ಹಾಗೂ ಮುಂಬರುವ ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಜೆಡಿಎಸ್ ಮಹತ್ವದ ಸಭೆ ನಡೆಸಿದೆ.

ಜೆಡಿಎಸ್ ವರಿಷ್ಠ ಎಚ್.ಡಿ. ದೇವೇಗೌಡ ನೇತೃತ್ವದಲ್ಲಿ ನಡೆಯುತ್ತಿರುವ ಮೂರು ದಿನಗಳ ಸಭೆಯಲ್ಲಿ ಪಕ್ಷದ ನಾಯಕರು, ಮುಖಂಡರು ಭಾಗವಹಿಸುತ್ತಿದ್ದು, ಪಕ್ಷದ ಮುಂದಿನ ನಡೆಯ ಕುರಿತು ಚರ್ಚೆ ನಡೆಸಿದ್ದಾರೆ.

ಅಲ್ಲದೆ, ಜುಲೈ ಕೊನೆಯ ವಾರದಲ್ಲಿ ದೇವೇಗೌಡರು ಸೇರಿದಂತೆ ಹಲವು ಮುಖಂಡರ ತಂಡಗಳು ರಾಜ್ಯಾದ್ಯಂತ ಪ್ರವಾಸ ಕೈಗೊಳ್ಳಲಿದ್ದಾರೆ. ಬೆಂಗಳೂರು ಉತ್ತರ ಲೋಕಸಭೆ ಕ್ಷೇತ್ರ ವ್ಯಾಪ್ತಿಯ ವಿಧಾನಸಭೆ ಮತ್ತು ಬಿಬಿಎಂಪಿ ವಾರ್ಡ್ಗಳ ಮುಖಂಡರು, ಪದಾಧಿಕಾರಿಗಳ ಜತೆ ದೇವೇಗೌಡರು ಸಭೆ ನಡೆಸಿದರು.

ಈ ಸಂದರ್ಭದಲ್ಲಿ ಮಾತನಾಡಿದ ದೇವೇಗೌಡರು, ಲೋಕಸಭೆಗೆ ನವೆಂಬರ್, ಡಿಸೆಂಬರ್ ಅಥವಾ ಮುಂದಿನ ಏಪ್ರಿಲ್ನಲ್ಲಿ ಚುನಾವಣೆ ನಡೆಯುವ ಸಾಧ್ಯತೆಗಳಿವೆ. ಈ ಹಿನ್ನೆಲೆಯಲ್ಲಿ ವಿಧಾನಸಭೆಯಲ್ಲಿ ಆಗಿರುವ ಹಿನ್ನಡೆಗೆ ಕಾರಣವಾದ ಅಂಶಗಳನ್ನು ಸರಿಪಡಿಸಿಕೊಂಡು ಚುನಾವಣೆ ಎದುರಿಸಲು ಸನ್ನದ್ಧರಾಗುವಂತೆ ಕಾರ್ಯಕರ್ತರಿಗೆ ಕರೆ ನೀಡಿದರು.

ಇದೇ ವೇಳೆ ಬಿಬಿಎಂಪಿ ಚುನಾವಣೆಗೆ ಪ್ರತಿ ವಾರ್ಡ್‌ಗೆ ಸಂಭವನೀಯ ಅಭ್ಯರ್ಥಿಗಳ ಹೆಸರನ್ನು ಶಿಫಾರಸ್ಸು ಮಾಡುವಂತೆ ಸ್ಥಳೀಯ ಮುಖಂಡರಿಗೆ ಅವರು ಸೂಚನೆ ನೀಡಿದರು.
ಮತ್ತಷ್ಟು
ಕೇಂದ್ರದಿಂದ ರಾಜ್ಯಕ್ಕೆ ಅನ್ಯಾಯ:ಯಡಿಯೂರಪ್ಪ
ಪೆಟ್ರೋಲ್ ಕೊರತೆ ಇಲ್ಲ: ಹರತಾಳ್ ಹಾಲಪ್ಪ
ಕೇಂದ್ರಕ್ಕೆ ನಿಯೋಗ: ಇದೀಗ ಕಾಂಗ್ರೆಸ್ ಸರದಿ
ಪೈರಸಿ ವಿರುದ್ಧ ಗೂಂಡಾ ಕಾಯ್ದೆ: ಜಯಮಾಲ ಆಗ್ರಹ
ಅತುಲ್ ರಾವ್ ಮಂಗಳೂರು ಜೈಲಿಗೆ ಸ್ಥಳಾಂತರ
ಪಾಲಿಕೆ ಚುನಾವಣೆ: ಬಿಜೆಪಿಯಿಂದ ಪ್ರಣಾಳಿಕೆ ಬಿಡುಗಡೆ