ಬಿಬಿಎಂಪಿ ಮೂರು ತಿಂಗಳೊಳಗೆ ಚುನಾವಣೆ ನಡೆಸುವಂತೆ ಹೈಕೋರ್ಟ್ ಆದೇಶ ನೀಡಿರುವ ಹಿನ್ನೆಲೆಯಲ್ಲಿ ಬಿಜೆಪಿ ಶನಿವಾರ ಮಹತ್ವದ ಸಭೆ ನಡೆಸಿ ಚುನಾವಣೆ ಕುರಿತು ಸಮಾಲೋಚನೆ ನಡೆಸಿತು.
ಖಾಸಗಿ ಹೊಟೇಲ್ ಒಂದರಲ್ಲಿ ರಾಜ್ಯಾಧ್ಯಕ್ಷ ಸದಾನಂದಗೌಡ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ಸಂಸದ ಅನಂತ್ ಕುಮಾರ್, ಸಚಿವರುಗಳಾದ ರಾಮಚಂದ್ರ ಗೌಡ, ಆರ್. ಅಶೋಕ್ ಸೇರಿದಂತೆ ಹಲವು ನಾಯಕರು ಉಪಸ್ಥಿತರಿದ್ದರು.
ಚುನಾವಣೆಗೆ ಪಕ್ಷ ಕೈಗೊಳ್ಳಬೇಕಾದ ಅಗತ್ಯ ಕ್ರಮಗಳ ಕುರಿತು ಸಭೆಯಲ್ಲಿ ಚರ್ಚೆ ನಡೆಸಲಾಯಿತು. ಶಾಸಕರ ವ್ಯಾಪ್ತಿಗೆ ಬರುವ ವಾರ್ಡ್‌ಗಳಲ್ಲಿ ಶಾಸಕರು ಕೈಗೊಳ್ಳಬೇಕಾದ ಕ್ರಮಗಳ ಕುರಿತು ಸಭೆಯಲ್ಲಿ ಮಹತ್ವದ ನಿರ್ಣಯ ಕೈಗೊಳ್ಳಲಾಯಿತು. ಅಲ್ಲದೆ, ವಾರ್ಡ್‌ಗಳ ಪದಾಧಿಕಾರಿಗಳು ಹಾಗೂ ಮುಖಂಡರುಗಳ ಜೊತೆ ಬಿಬಿಎಂಪಿ ಚುನಾವಣೆಗೆ ಸಜ್ಜಾಗುವಂತೆ ಸದಾನಂದಗೌಡರು ಸೂಚನೆ ನೀಡಿದರು.
ಈಗಾಗಲೇ ನಡೆದ ವಿಧಾನಸಭೆ ಹಾಗೂ ಪರಿಷತ್ ಚುನಾವಣೆಯಿಂದ ಬೀಗುತ್ತಿರುವ ಬಿಜೆಪಿಗೆ ಬಿಬಿಎಂಪಿ ಚುನಾವಣೆ ಮಹತ್ವವಾಗಿದೆ. ಇದೇ ಸಂದರ್ಭದಲ್ಲಿ ಮಾತನಾಡಿದ ಸಾರಿಗೆ ಸಚಿವ ಆರ್. ಅಶೋಕ್, ಬಿಬಿಎಂಪಿ ಚುನಾವಣೆಗೆ ಪಕ್ಷ ಸಿದ್ಧಗೊಂಡಿದೆ. ಯಾವ ಸಂದರ್ಭದಲ್ಲಿಯೂ ಚುನಾವಣೆ ನಡೆಸಿದರೂ, ಪಕ್ಷ ಎದುರಿಸಲು ಸಿದ್ದವಿದೆ ಎಂದು ತಿಳಿಸಿದ್ದಾರೆ.
|