ಪಕ್ಷದಿಂದ ಗೆದ್ದವರು ಪಕ್ಷ ತೊರೆದು ಹೋಗಿದ್ದಾರೆ. ಅದಕ್ಕೆ ನಾನೇನು ಮಾಡಲಿ? ಇದು ಜೆಡಿಎಸ್ ರಾಷ್ಟ್ರೀಯ ಅಧ್ಯಕ್ಷ ಎಚ್.ಡಿ. ದೇವೇಗೌಡ ಅವರ ಪ್ರತಿಕ್ರಿಯೆ.
ಜೆಡಿಎಸ್ ಇಬ್ಬರು ಶಾಸಕರು ಪಕ್ಷ ತೊರೆದು ಬಿಜೆಪಿ ಸೇರ್ಪಡೆಗೊಂಡ ಬಗ್ಗೆ ದೇವೇಗೌಡರನ್ನು ಮಾಧ್ಯಮದವರು ಕೇಳಿದ ಪ್ರಶ್ನೆಗೆ ಉತ್ತರಿಸಿದ ಅವರು, ಪಕ್ಷದಿಂದ ಹೋಗಿದ್ದಾರೆ ಇನ್ನು ಆ ಬಗ್ಗೆ ತಲೆಕೆಡಿಸಿಕೊಂಡು ಪ್ರತಿಕ್ರಿಯೆ ನೀಡುವ ಅಗತ್ಯವಿಲ್ಲ ಎಂದು ಗುಡುಗಿದರು.
ಈ ಬಗ್ಗೆ ಪ್ರತಿಕ್ರಿಯಿಸಿರುವ ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ, ಇಂದು ರಾಜಕೀಯದಲ್ಲಿ ವಿಶ್ವಾಸ ಮುಖ್ಯವಲ್ಲ ಹಣ ಮುಖ್ಯ ಎಂಬುದು ಮತ್ತೊಮ್ಮೆ ಬಿಜೆಪಿ ಸಾಬೀತು ಪಡಿಸಿದೆ ಎಂದು ಕಿಡಿಕಾರಿದ್ದಾರೆ.
ಅಧಿಕಾರಕ್ಕಾಗಿ ಬಿಜೆಪಿ ಯಾವ ಮಟ್ಟಕ್ಕೆ ಬೇಕಾದರೂ ಹೋಗುತ್ತಾರೆ ಎಂಬುದನ್ನು ತೋರಿಸಿಕೊಟ್ಟಿದ್ದಾರೆ. ಬಿಜೆಪಿ ನಾಯಕರು ಪ್ರಜಾಪ್ರಭುತ್ವದ ಮೌಲ್ಯಗಳನ್ನು ಕಗ್ಗೊಲೆ ಮಾಡುತ್ತಿದ್ದಾರೆ. ಜನತೆ ಇಂತಹ ವಿಷಯಗಳನ್ನು ಲಘುವಾಗಿ ಪರಿಗಣಿಸಿದರೆ ಮುಂದೆ ದೊಡ್ಡ ಗಂಡಾಂತರ ಕಾಡಲಿದೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಕಾಂಗ್ರೆಸ್ ಪ್ರತಿಕ್ರಿಯೆ
ಬಿಜೆಪಿಯ ಕುತಂತ್ರ ಪ್ರಜಾಪ್ರಭುತ್ವದ ಅವನತಿಯ ಸಂಕೇತವಾಗಿದೆ. ಇಂತಹ ಕುತಂತ್ರಕ್ಕೆ ಜನರೇ ತಕ್ಕ ಶಾಸ್ತ್ತ್ರಿ ಮಾಡ್ತಾರೆ ಎಂದು ಕೆಪಿಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಪ್ರತಿಕ್ರಿಯೆ ನೀಡಿದ್ದಾರೆ.
|