ಮುಖ್ಯ ಪುಟ  ಸುದ್ದಿ ಜಗತ್ತು > ಸುದ್ದಿಗಳು > ರಾಜ್ಯ ಸುದ್ದಿ
ಸಲಹೆ/ಪ್ರತಿಕ್ರಿಯೆಮಿತ್ರನಿಗೆ ಕಳುಹಿಸಿಈ ಪುಟ ಮುದ್ರಿಸಿ
 
ಶೀಘ್ರವೇ ಸಚಿವ ಸಂಪುಟ ವಿಸ್ತರಣೆ :ಯಡಿಯೂರಪ್ಪ  Search similar articles
ರಾಜ್ಯ ರಾಜಕೀಯದಲ್ಲಿ ಮಹತ್ತರ ಬೆಳವಣಿಗೆ ಕಂಡು ಬಂದಿರುವ ಹಿನ್ನೆಲೆಯಲ್ಲಿ ಬಿಜೆಪಿ ಸರ್ಕಾರ ಶೀಘ್ರವೇ ಸಂಪುಟ ವಿಸ್ತರಿಸಲು ಚಿಂತನೆ ನಡೆಸುತ್ತಿದೆ.

ಈ ಬಗ್ಗೆ ಮಾಹಿತಿ ನೀಡಿರುವ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ, ಈ ತಿಂಗಳ 17ರಂದು ಆರಂಭಗೊಳ್ಳಲಿರುವ ಬಜೆಟ್ ಅಧಿವೇಶನಕ್ಕೂ ಮುನ್ನ ಸಚಿವ ಸಂಪುಟ ವಿಸ್ತರಣೆ ಮಾಡಲಾಗುವುದು ಎಂದು ತಿಳಿಸಿದ್ದಾರೆ.

ವಿಧಾನಸೌಧದ ಪಶ್ಚಿಮ ದ್ವಾರದಲ್ಲಿರುವ ಇಂದು(ಭಾನುವಾರ) ಮಾಜಿ ಉಪಪ್ರಧಾನಿ ಡಾ. ಬಾಬು ಜಗಜೀವನ್‌ರಾವ್ ಅವರ 22 ಪುಣ್ಯತಿಥಿ ಆಚರಣೆ ಸಂದರ್ಭದಲ್ಲಿ ಸುದ್ದಿಗಾರರೊಂದಿಗೆ ಮಾತನಾಡುತ್ತಿದ್ದ ಅವರು, ಬಿಜೆಪಿ ಪಕ್ಷದ ತತ್ವ ಸಿದ್ದಾಂತಗಳನ್ನು ಒಪ್ಪಿಕೊಂಡು ಬರುವವರಿಗೆ ಪಕ್ಷ ಸದಾ ಸ್ವಾಗತಿಸುತ್ತದೆ. ಪಕ್ಷಕ್ಕೆ ಬಂದವರಿಗೆ ಹಿರಿಯ ಮುಖಂಡರೊಂದಿಗೆ ಚರ್ಚಿಸಿ ಸೂಕ್ತ ಸ್ಥಾನಮಾನ ನೀಡಲಾಗುವುದು ಎಂದು ಅವರು ತಿಳಿಸಿದರು.

ಕಾಂಗ್ರೆಸ್ ಹಾಗೂ ಜೆಡಿಎಸ್ ಪಕ್ಷದ ಹಲವು ನಾಯಕರು ಪಕ್ಷ ಸೇರುವ ಕುರಿತು ಒಲವು ವ್ಯಕ್ತಪಡಿಸಿದ್ದು, ಶೀಘ್ರವೇ ಸೇರ್ಪಡೆಗೊಳ್ಳಲಿದ್ದಾರೆ ಎಂದು ಅವರು ತಿಳಿಸಿದರು.

ಈ ಮಧ್ಯೆ ಪಕ್ಷದಲ್ಲಿ ಕೆಲ ಸಚಿವರಿಗೆ ಸಚಿವ ಸ್ಥಾನ ಸಿಗದಿರುವ ಬಗ್ಗೆ ಅಸಮಾಧಾನಗೊಂಡಿರುವ ಹಿನ್ನೆಲೆಯಲ್ಲಿ ಬಿಜೆಪಿ ಶೀಘ್ರ ಸಚಿವ ಸಂಪುಟ ನಿರ್ಧರಿಸುವ ಕುರಿತು ಚಿಂತನೆ ನಡೆಸಿದೆ ಎಂದು ತಿಳಿದು ಬಂದಿದೆ.
ಮತ್ತಷ್ಟು
ಸಿದ್ದರಾಮಯ್ಯ ಪಕ್ಷ ಬಿಟ್ಟು ಹೋಗಲ್ಲ:ಖರ್ಗೆ
ಪಕ್ಷ ಒಡೆಯುವ ಕೆಲಸ ಬಿಜೆಪಿ ಮಾಡಿಲ್ಲ :ಯಡಿಯೂರಪ್ಪ
ಶಾಸಕರ ವಲಸೆಗೆ ತಲೆಕೆಡಿಸಿಕೊಳ್ಳುವುದಿಲ್ಲ :ದೇವೇಗೌಡ
ಕಾಂಗ್ರೆಸ್, ಜೆಡಿಎಸ್‌ನ ನಾಲ್ವರು ಶಾಸಕರು ಬಿಜೆಪಿಗೆ
600 ಮಾತ್ರೆ ನುಂಗಿದರೂ ಚಿಕೂನ್ ಗುನ್ಯಾ ಬಿಡಲಿಲ್ಲ!
ಚುನಾವಣೆಗೆ ಸಜ್ಜಾಗಿ: ಕಾರ್ಯಕರ್ತರಿಗೆ ವೆಂಕಯ್ಯ