ಮುಖ್ಯ ಪುಟ  ಸುದ್ದಿ ಜಗತ್ತು > ಸುದ್ದಿಗಳು > ರಾಜ್ಯ ಸುದ್ದಿ
ಸಲಹೆ/ಪ್ರತಿಕ್ರಿಯೆಮಿತ್ರನಿಗೆ ಕಳುಹಿಸಿಈ ಪುಟ ಮುದ್ರಿಸಿ
 
ರಾಜೀವ್‌ಗಾಂಧಿ ವಿವಿ ಬಳ್ಳಾರಿಗೆ?  Search similar articles
ರಾಜೀವ್‌ಗಾಂಧಿ ಆರೋಗ್ಯ ವಿಶ್ವವಿದ್ಯಾಲಯವನ್ನು ರಾಮನಗರದಿಂದ ಬೇರೆಡೆಗೆ ವರ್ಗಾಯಿಸುವ ಸಂಚು ರೂಪಿಸಲಾಗುತ್ತಿದೆ ಎಂದು ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಆರೋಪಿಸಿದ ಬೆನ್ನಲ್ಲೆ, ರಾಜೀವ್‌ಗಾಂಧಿ ಆರೋಗ್ಯ ವಿಶ್ವವಿದ್ಯಾಲಯವನ್ನು ಬಳ್ಳಾರಿಗೆ ತರಲು ಪ್ರಾಮಾಣಿಕ ಪ್ರಯತ್ನ ನಡೆಸುವುದಾಗಿ ಆರೋಗ್ಯ ಸಚಿವ ಶ್ರೀರಾಮುಲು ತಿಳಿಸಿದ್ದಾರೆ.

ನಗರದಲ್ಲಿ ಖಾಸಗಿ ಕಾರ್ಯಕ್ರಮವೊಂದರಲ್ಲಿ ಮಾತನಾಡಿದ ಅವರು, ಈ ಹಿಂದೆ ಬಳ್ಳಾರಿಯಲ್ಲಿ ರಾಜೀವ್ ಗಾಂಧಿ ವಿವಿ ಆರಂಭಿಸಬೇಕೆಂಬ ಪ್ರಸ್ತಾಪ ಇತ್ತು. ಆದರೆ ಈಗ ಅದನ್ನು ರಾಮನಗರಕ್ಕೆ ಸ್ಥಳಾಂತರಿಸಲು ಉದ್ದೇಶಿಸಿರುವ ವಿವಿಯನ್ನು ಬಳ್ಳಾರಿಗೆ ತರಲು ಪ್ರಾಮಾಣಿಕ ಪ್ರಯತ್ನ ಮಾಡುವುದಾಗಿ ತಿಳಿಸಿದ್ದಾರೆ.

ಈ ಕಾರ್ಯಕ್ಕೆ ಪ್ರವಾಸೋದ್ಯಮ ಸಚಿವ ಜನಾರ್ದನ ರೆಡ್ಡಿ ಅವರ ನೇತೃತ್ವದಲ್ಲಿ ಪ್ರಯತ್ನಿಸಲಾಗುವುದು ಎಂದು ಅವರು ತಿಳಿಸಿದ್ದಾರೆ.

ಆರೋಗ್ಯ ಇಲಾಖೆಯಲ್ಲಿ ಗುಜರಾತ್ ಸೇರಿದಂತೆ ಇತರ ರಾಜ್ಯಗಳು ಜಾರಿಗೆ ತಂದಿರುವ ಯೋಜನೆಗಳನ್ನು ರಾಜ್ಯದಲ್ಲೂ ಜಾರಿಗೆ ತರುವ ಕುರಿತು ಮುಖ್ಯಮಂತ್ರಿಗಳೊಂದಿಗೆ ಚರ್ಚಿಸಲಾಗುವುದು ಎಂದು ಅವರು ಇದೇ ಸಂದರ್ಭದಲ್ಲಿ ತಿಳಿಸಿದರು.

ಉತ್ತರಕರ್ನಾಟಕ ಹಾಗೂ ಬಳ್ಳಾರಿಯ ಅಭಿವೃದ್ದಿಗೆ ಸಂಬಂಧಿಸಿದಂತೆ ಮೂಲ ಸೌಲಭ್ಯಗಳನ್ನು ಒದಗಿಸಿ ಕೊಡಲು ಅಗತ್ಯ ಕ್ರಮಗಳನ್ನು ಕೈಗೊಳ್ಳುವುದಾಗಿ ಅವರು ಹೇಳಿದ್ದಾರೆ.
ಮತ್ತಷ್ಟು
ಬೆಂಬಲಿಗರ ಜೊತೆ ಸಿದ್ದರಾಮಯ್ಯ ಮಹತ್ವದ ಸಭೆ
ಸಿಲಿಂಡರ್ ಸ್ಪೋಟ: ಇಬ್ಬರ ಬಾಲಕರ ಸಾವು
ಶೀಘ್ರವೇ ಸಚಿವ ಸಂಪುಟ ವಿಸ್ತರಣೆ :ಯಡಿಯೂರಪ್ಪ
ಸಿದ್ದರಾಮಯ್ಯ ಪಕ್ಷ ಬಿಟ್ಟು ಹೋಗಲ್ಲ:ಖರ್ಗೆ
ಪಕ್ಷ ಒಡೆಯುವ ಕೆಲಸ ಬಿಜೆಪಿ ಮಾಡಿಲ್ಲ :ಯಡಿಯೂರಪ್ಪ
ಶಾಸಕರ ವಲಸೆಗೆ ತಲೆಕೆಡಿಸಿಕೊಳ್ಳುವುದಿಲ್ಲ :ದೇವೇಗೌಡ