ಮುಖ್ಯ ಪುಟ  ಸುದ್ದಿ ಜಗತ್ತು > ಸುದ್ದಿಗಳು > ರಾಜ್ಯ ಸುದ್ದಿ
ಸಲಹೆ/ಪ್ರತಿಕ್ರಿಯೆಮಿತ್ರನಿಗೆ ಕಳುಹಿಸಿಈ ಪುಟ ಮುದ್ರಿಸಿ
 
ಎಸ್‌ಬಿಎಂಗೆ ವಂಚನೆ: ಸಿಬಿಐ ಬಲೆಯಲ್ಲಿ ಸಚಿವರು  Search similar articles
ಮೊದಲ ಬಾರಿಗೆ ದಕ್ಷಿಣ ಭಾರತದಲ್ಲಿ ಅಧಿಕಾರದ ಚುಕ್ಕಾಣಿ ಹಿಡಿದಿರುವ ಬಿಜೆಪಿಗೆ ಸರ್ಕಾರದ ಭದ್ರತೆಗಾಗಿ ಪ್ರತಿಪಕ್ಷದ ನಾಯಕರನ್ನು ಸೆಳೆಯಲು ಯತ್ನಿಸುತ್ತಿರುವಂತೆ ಇತ್ತ ಬಿಜೆಪಿ ಶಾಸಕರಿಬ್ಬರು ಸ್ಟೇಟ್‌ಬ್ಯಾಂಕ್ ಹಗರಣವೊಂದರಲ್ಲಿ ಭಾಗಿಯಾಗಿರುವ ವಿಷಯ ಬೆಳಕಿಗೆ ಬಂದಿದೆ.

ಸಮಾಜ ಕಲ್ಯಾಣ ಇಲಾಖೆ ಸಚಿವ ಹಿರಿಯೂರು ಕ್ಷೇತ್ರದ ಪಕ್ಷೇತರ ಶಾಸಕ ಡಿ. ಸುಧಾಕರ್ ಹಾಗೂ ವಸತಿ-ಮುಜರಾಯಿ ಸಚಿವ ಕೃಷ್ಣಯ್ಯ ಶೆಟ್ಟಿ ಅವರು ಸ್ಟೇಟ್ ಬ್ಯಾಂಕ್ ಆಫ್ ಮೈಸೂರಿನಲ್ಲಿ ಗೃಹ ಸಾಲ ಪಡೆಯಲು ನಕಲಿ ವೇತನ ಪ್ರಮಾಣಪತ್ರ ಸಲ್ಲಿಸಿ ವಂಚಿಸಿರುವ ಪ್ರಕರಣದಲ್ಲಿ ಭಾಗಿಯಾಗಿದ್ದಾರೆ ಎಂಬುದು ಸಿಬಿಐ ತನಿಖೆಯಿಂದ ಬಹಿರಂಗಗೊಂಡಿದೆ.

ಈ ಇಬ್ಬರು ಶಾಸಕರು ನಡೆಸುತ್ತಿರುವ ರಿಯಲ್ ಎಸ್ಟೇಟ್ ಸಂಸ್ಥೆಗಳಲ್ಲಿ ನಿವೇಶನ ಹಾಗೂ ಮನೆ ಖರೀದಿಸಿದ ಗ್ರಾಹಕರಿಗೆ, ಸ್ಟೇಟ್ ಬ್ಯಾಂಕ್‌ನಲ್ಲಿ ನಕಲಿ ವೇತನ ಪ್ರಮಾಣ ಪತ್ರ ಸೃಷ್ಟಿಸಲು ಪರೋಕ್ಷವಾಗಿ ಸಹಕಾರ ನೀಡಿದ್ದಾರೆ. ಈ ಮೂಲಕ ಬ್ಯಾಂಕಿನಿಂದ ಹೆಚ್ಚಿನ ಸಾಲ ಮಂಜೂರು ಮಾಡಿಸಿಕೊಂಡಿರುವುದು ತನಿಖೆಯಿಂದ ಸಾಬೀತಾಗಿದೆ ಎಂದು ಸಿಬಿಐ ಅಧಿಕಾರಿಗಳು ತಿಳಿಸಿದ್ದಾರೆ.

ಈ ಹಿನ್ನೆಲೆಯಲ್ಲಿ ಈ ಇಬ್ಬರು ಶಾಸಕರ ವಿರುದ್ಧ ಶೀಘ್ರವೇ ಆರೋಪ ಪಟ್ಟಿ ಸಲ್ಲಿಸಲಾಗುವುದು ಎಂದು ತಿಳಿಸಿರುವ ಸಿಬಿಐ, ಶಾಸಕರ ವಿರುದ್ಧ ಕ್ರಿಮಿನಲ್ ಪ್ರಕರಣದ ದಾಖಲಿಸುವಂತೆ ಎಸ್‌ಬಿಎಂಗೆ ಸೂಚನೆ ನೀಡಿದೆ.
ಮತ್ತಷ್ಟು
ರಾಜೀವ್‌ಗಾಂಧಿ ವಿವಿ ಬಳ್ಳಾರಿಗೆ?
ಬೆಂಬಲಿಗರ ಜೊತೆ ಸಿದ್ದರಾಮಯ್ಯ ಮಹತ್ವದ ಸಭೆ
ಸಿಲಿಂಡರ್ ಸ್ಪೋಟ: ಇಬ್ಬರ ಬಾಲಕರ ಸಾವು
ಶೀಘ್ರವೇ ಸಚಿವ ಸಂಪುಟ ವಿಸ್ತರಣೆ :ಯಡಿಯೂರಪ್ಪ
ಸಿದ್ದರಾಮಯ್ಯ ಪಕ್ಷ ಬಿಟ್ಟು ಹೋಗಲ್ಲ:ಖರ್ಗೆ
ಪಕ್ಷ ಒಡೆಯುವ ಕೆಲಸ ಬಿಜೆಪಿ ಮಾಡಿಲ್ಲ :ಯಡಿಯೂರಪ್ಪ