ಮುಖ್ಯ ಪುಟ  ಸುದ್ದಿ ಜಗತ್ತು > ಸುದ್ದಿಗಳು > ರಾಜ್ಯ ಸುದ್ದಿ
ಸಲಹೆ/ಪ್ರತಿಕ್ರಿಯೆಮಿತ್ರನಿಗೆ ಕಳುಹಿಸಿಈ ಪುಟ ಮುದ್ರಿಸಿ
 
ಸಿದ್ದರಾಮಯ್ಯ ನಿವಾಸಕ್ಕೆ ಕೇಂದ್ರ ಸಚಿವರು  Search similar articles
ಕಳೆದ ಎರಡು ದಿನಗಳಿಂದ ರಾಜ್ಯ ರಾಜಕೀಯದಲ್ಲಾಗಿರುವ ಬದಲಾವಣೆಯಿಂದ ಕಾಂಗ್ರೆಸ್ ಆತಂಕಗೊಂಡಿದೆ. ಈ ಹಿನ್ನೆಲೆಯಲ್ಲಿ ಪಕ್ಷವನ್ನು ಬಲಪಡಿಸುವ ನಿಟ್ಟಿನಲ್ಲಿ ಕೇಂದ್ರ ಸಚಿವ ಸಂತೋಷ್ ಕುಮಾರ್ ಬಗಾಡಿಯಾ ಸೋಮವಾರ ದಿಢೀರ್ ನಗರಕ್ಕೆ ಆಗಮಿಸಿದ್ದು, ಮಾಜಿ ಉಪಮುಖ್ಯಮಂತ್ರಿ ಸಿದ್ದರಾಮಯ್ಯನವರೊಂದಿಗೆ ಮಾತುಕತೆ ನಡೆಸಿದ್ದಾರೆ.

ಸಿದ್ದರಾಮಯ್ಯ ನಿವಾಸಕ್ಕೆ ತೆರಳಿದ ಕೇಂದ್ರ ಸಚಿವರು ಸುದೀರ್ಘ ಮಾತುಕತೆ ನಡೆಸಿದರು. ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಿದ್ದರಾಮಯ್ಯನವರು ಕಾಂಗ್ರೆಸ್ ಪಕ್ಷ ಬಿಟ್ಟು ಹೋಗುವ ಪ್ರಶ್ನೆಯೇ ಇಲ್ಲ. ಪ್ರಸ್ತುತ ರಾಜಕೀಯದ ಕುರಿತು ಅವರೊಂದಿಗೆ ಚರ್ಚೆ ಮಾಡುವ ನಿಟ್ಟಿನಲ್ಲಿ ಭೇಟಿ ಮಾಡಿದ್ದೆ ಎಂದು ತಿಳಿಸಿದರು.

ಇದೇ ಸಂದರ್ಭದಲ್ಲಿ ಮಾತನಾಡಿದ ಸಿದ್ದರಾಮಯ್ಯ, ತಾನು ಬಿಜೆಪಿ ಸೇರುತ್ತೇನೆ ಎಂಬುದು ಗಾಳಿಸುದ್ದಿ. ಇದುವರೆಗೆ ಯಾವ ಬಿಜೆಪಿ ನಾಯಕರು ತಮ್ಮನ್ನು ಭೇಟಿ ಮಾಡಿಲ್ಲ ಎಂದು ಹೇಳಿದರು.

ಇತ್ತೀಚೆಗೆ ನಡೆದ ಚುನಾವಣೆಯಲ್ಲಿ ಜೆಡಿಎಸ್‌ನೊಂದಿಗೆ ಮೈತ್ರಿ ಮಾಡಿಕೊಂಡಿರುವ ಬಗ್ಗೆ ಅಸಮಾಧಾನಗೊಂಡಿದ್ದ ಸಿದ್ದರಾಮಯ್ಯ, ವಿಧಾನಸಭಾ ಅಧಿವೇಶನದಲ್ಲಿ ಭಾಗವಹಿಸಿರಲಿಲ್ಲ. ಅಲ್ಲದೆ, ದೆಹಲಿಗೆ ತೆರಳಿದ್ದ ಕಾಂಗ್ರೆಸ್ ನಿಯೋಗಕ್ಕೆ ಬಹಿಷ್ಕಾರ ಹಾಕಿದ್ದರು. ಈ ಎಲ್ಲಾ ಬೆಳವಣಿಗೆಯನ್ನು ಹೈಕಮಾಂಡ್ ಗಮನಕ್ಕೆ ತರಲಾದ ಹಿನ್ನೆಲೆಯಲ್ಲಿ ಇಂದು ನಗರಕ್ಕಾಗಮಿಸಿದ ಕೇಂದ್ರ ಸಚಿವರು ಹಲವು ಮುಖಂಡರು ಭೇಟಿ ಮಾಡಿ ಚರ್ಚೆ ನಡೆಸಿದರು.
ಮತ್ತಷ್ಟು
ಎಸ್‌ಬಿಎಂಗೆ ವಂಚನೆ: ಸಿಬಿಐ ಬಲೆಯಲ್ಲಿ ಸಚಿವರು
ರಾಜೀವ್‌ಗಾಂಧಿ ವಿವಿ ಬಳ್ಳಾರಿಗೆ?
ಬೆಂಬಲಿಗರ ಜೊತೆ ಸಿದ್ದರಾಮಯ್ಯ ಮಹತ್ವದ ಸಭೆ
ಸಿಲಿಂಡರ್ ಸ್ಪೋಟ: ಇಬ್ಬರ ಬಾಲಕರ ಸಾವು
ಶೀಘ್ರವೇ ಸಚಿವ ಸಂಪುಟ ವಿಸ್ತರಣೆ :ಯಡಿಯೂರಪ್ಪ
ಸಿದ್ದರಾಮಯ್ಯ ಪಕ್ಷ ಬಿಟ್ಟು ಹೋಗಲ್ಲ:ಖರ್ಗೆ