ರಾಜ್ಯದಲ್ಲಿ ಕನ್ನಡ ಚಿತ್ರಗಳಲ್ಲಿ ಕಂಡು ಬಂದಿರುವ ಪೈರಸಿ ಹಾವಳಿಗೆ ತಡೆ ಒಡ್ಡುವಂತೆ ಕನ್ನಡ ಚಲನಚಿತ್ರ ವಾಣಿಜ್ಯ ಮಂಡಳಿ ಪದಾಧಿಕಾರಿಗಳು ಪೊಲೀಸ್ ಇಲಾಖೆಗೆ ಮನವಿ ಮಾಡಿದ್ದಾರೆ.
ಸೋಮವಾರ ಚಲನಚಿತ್ರ ವಾಣಿಜ್ಯ ಮಂಡಳಿ ಅಧ್ಯಕ್ಷೆ ಜಯಮಾಲ ನೇತೃತ್ವದಲ್ಲಿನ ಸಮಿತಿ ಜಂಟಿ ಪೊಲೀಸ್ ಆಯುಕ್ತ ಗೋಪಾಲ್ ಹೊಸೂರ್ ಅವರನ್ನು ಭೇಟಿ ಮಾಡಿ ಮಾತುಕತೆ ನಡೆಸಿತು.
ಈ ಸಂದರ್ಭದಲ್ಲಿ ಮಾತನಾಡಿದ ಆಯುಕ್ತರು, ಪೈರಸಿ ಹಾವಳಿಯನ್ನು ತಡೆಗಟ್ಟುವ ನಿಟ್ಟಿನಲ್ಲಿ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಹಾಗೂ ತಪ್ಪಿತಸ್ಥರಿಗೆ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಭರವಸೆ ನೀಡಿದರು.
ಇದೇ ವೇಳೆ ಮಾತನಾಡಿದ ಮಂಡಳಿ ಅಧ್ಯಕ್ಷೆ ಜಯಮಾಲ, ಕನ್ನಡ ಚಿತ್ರರಂಗದ ಮೌಲ್ಯಗಳನ್ನು ಉಳಿಸಿಕೊಳ್ಳುವ ನಿಟ್ಟಿನಲ್ಲಿ ಸರಕಾರಕ್ಕಿಂತಲೂ ಪೊಲೀಸ್ ಇಲಾಖೆಯ ಸಹಕಾರ ಅಗತ್ಯ. ಈ ನಿಟ್ಟಿನಲ್ಲಿ ಇಲಾಖೆಗೆ ಮನವಿ ಸಲ್ಲಿಸಲಾಗಿದೆ ಎಂದು ತಿಳಿಸಿದರು. ಈ ಸಂದರ್ಭದಲ್ಲಿ ಚಲನಚಿತ್ರ ವಾಣಿಜ್ಯ ಮಂಡಳಿಯ ಉಪಾಧ್ಯಕ್ಷ ರಾಕ್ಲೈನ್ ವೆಂಕಟೇಶ್, ನಿರ್ಮಾಪಕಿ ಪಾರ್ವತಮ್ಮ ರಾಜ್‌ಕುಮಾರ್ ಸೇರಿದಂತೆ ಮಂಡಳಿಯ ಹಲವು ಸದಸ್ಯರು ಉಪಸ್ಥಿತರಿದ್ದರು.
|